ಐಪಿಎಲ್ 2023: ಕೆಕೆಆರ್ ಎದುರು ಆರ್ ಸಿಬಿ ಸೋತಿದ್ದಕ್ಕೆ ಫುಲ್ ಖುಷಿಯಾದ ಜೂಹಿ ಚಾವ್ಲಾ, ಹೇಳಿದ್ದು ಹೀಗೆ...
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೆಕೆಆರ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ ಸೋತಿದ್ದಕ್ಕೆ ಬಾಲಿವುಡ್ ನಟಿ ಜೂಹಿ ಚಾವ್ಲಾ ಫುಲ್ ಖುಷಿಯಾಗಿದ್ದಾರೆ.

ಕೋಲ್ಕತ್ತಾ: ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೆಕೆಆರ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ ಸೋತಿದ್ದಕ್ಕೆ ಬಾಲಿವುಡ್ ನಟಿ ಜೂಹಿ ಚಾವ್ಲಾ ಫುಲ್ ಖುಷಿಯಾಗಿದ್ದಾರೆ.
ಪಂದ್ಯ ಮುಗಿದ ನಂತರ ಎಎನ್ ಐ ಜೊತೆಗೆ ಮಾತನಾಡಿದ ಜೂಹ್ಲಿ ಚಾವ್ಲಾ, ಇದೇ ರೀತಿ ಎಲ್ಲಾ ಪಂದ್ಯಗಳನ್ನು ಗೆದ್ದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್ ಪ್ರವೇಶಿಸಲಿ ಎಂದು ಹಾರೈಸಿದರು.
ಕೆಕೆಆರ್ ತಂಡದ ಪ್ರದರ್ಶನದಿಂದ ನನಗೆ ತುಂಬಾ ಸಂತಸವಾಗಿದೆ. ಎಲ್ಲಾ ರೀತಿಯ ಪಂದ್ಯಗಳು ಇದೇ ರೀತಿ ಅಂತ್ಯವಾಗಲಿ ಎಂದು ಪ್ರಾರ್ಥಿಸುತ್ತೇನೆ ಮತ್ತು ಅದೇ ಭರವಸೆಯಿದೆ ಎಂದು ಅವರು ಹೇಳಿದರು.
ಕೆಕೆಆರ್ ತಂಡ ಈ ಬಾರಿಯ ಎಲ್ಲಾ ಪಂದ್ಯಗಳನ್ನು ಇದೇ ರೀತಿ ಗೆದ್ದು, ಫೈನಲ್ ತಲುಪಿ ಚಾಂಪಿಯನ್ ಆಗಲಿ ಎಂದು ಹಾರೈಸುವುದಾಗಿ ಜೂಹಿ ಚಾವ್ಲಾ ಹೇಳಿದರು. ಬಾಲಿವುಡ್ ನಟಿ ಜೂಹಿ ಚಾವ್ಲಾ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸಹ ಮಾಲೀಕರಾಗಿದ್ದಾರೆ.
ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ 81 ರನ್ ಗಳ ಅಂತರದಿಂದ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸುವ ಮೂಲಕ ಈ ಬಾರಿಯ ಐಪಿಎಲ್ ನಲ್ಲಿ ಮೊದಲ ಗೆಲುವು ದಾಖಲಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


