ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 7 ವಿಕೆಟ್ ಗಳ ಜಯ
ಮುಂಬೈ ನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್- ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್ ಗಳ ಜಯ ಸಾಧಿಸಿದೆ.

ಮುಂಬೈ: ಮುಂಬೈ ನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್- ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್ ಗಳ ಜಯ ಸಾಧಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ನ್ನು 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿ 158 ರನ್ ಗಳ ಟಾರ್ಗೆಟ್ ನೀಡಿತ್ತು. ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ (13 ಎಸೆತಗಳಲ್ಲಿ 21 ರನ್), ಇಶಾನ್ ಕಿಶನ್ (21 ಎಸೆತಗಳಲ್ಲಿ 32 ರನ್) ಗಳಿಸಿ ಉತ್ತಮ ಆರಂಭಿಕ ಆಟ ಪ್ರದರ್ಶಿಸಿದರು. ನಂತರ ಕ್ರೀಸ್ ಗೆ ಬಂದ ಕೆಮರೋನ್ ಗ್ರೀನ್ 11 ಎಸೆತಗಳಲ್ಲಿ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ಪೈಕಿ ತಿಲಕ್ ವರ್ಮಾ 18 ಎಸೆತಗಳಲ್ಲಿ 22 ರನ್ ಗಳಿಸಿದರೆ, ಟಿಮ್ ಡೇವಿಡ್ 22 ಎಸೆತಗಳಲ್ಲಿ 31 ರನ್ ಗಳಿಸಿದರು. ಚೆನ್ನೈ ಸೂಪರ್ ಕಿಂಗ್ಸ್ ಪರ ತುಷಾರ್ ದೇಶಪಾಂಡೆ 31 ರನ್ ನೀಡಿ 2 ವಿಕೆಟ್ ಪಡೆದರೆ, 20 ರನ್ ನೀಡಿ, 3 ವಿಕೆಟ್ ಪಡೆದ ರವೀಂದ್ರ ಜಡೇಜ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


