ಐಪಿಎಲ್ 2023: ಜೈಸ್ವಾಲ್, ಬಟ್ಲರ್ ಅರ್ಧಶತಕ, ಡೆಲ್ಲಿ ವಿರುದ್ಧ 57 ರನ್ ಅಂತರದಿಂದ ರಾಜಸ್ಥಾನ ಗೆಲುವು
ಅಸ್ಸಾಂನ ಗುವಾಹಟಿಯಲ್ಲಿ ನಡೆದ ಐಪಿಎಲ್ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ 57 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದೆ.

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ನಡೆದ ಐಪಿಎಲ್ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ 57 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ನಿಗದಿತ ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್ ಕಲೆ ಹಾಕಿತು.
ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ 31 ಎಸೆತಗಳಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್ ನೊಂದಿಗೆ 60 ರನ್ ಗಳಿಸಿದರೆ, ಜೋಸ್ ಬಟ್ಲರ್ 51 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್ ನೊಂದಿಗೆ 79, ಹೆಟ್ಮಿಯರ್ 4 ಸಿಕ್ಸರ್ ಹಾಗೂ ಒಂದು ಬೌಂಡರಿಯೊಂದಿಗೆ 39 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಮುಕೇಶ್ ಕುಮಾರ್ 2,ಕುಲದೀಪ್ ಯಾದವ್ ಹಾಗೂ ಪೊವೆಲ್ ತಲಾ 1 ವಿಕೆಟ್ ಪಡೆದರು.
ನಂತರ ರಾಜಸ್ಥಾನ ರಾಯಲ್ಸ್ ನೀಡಿದ 200 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಲಷ್ಟೇ ಶಕ್ತವಾಯಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ 65, ಲಲಿತ್ ಯಾದವ್ 38 ರನ್ ಗಳಿಸಿದರು. ಉಳಿದ ಯಾವುದೇ ಆಟಗಾರರು ಕ್ರೀಸ್ ನಲ್ಲಿ ಹೆಚ್ಚು ಹೊತ್ತು ನಿಲಲಿಲ್ಲ. ಇದರಿಂದಾಗಿ 57 ರನ್ ಗಳ ಅಂತರದಿಂದ ರಾಜಸ್ಥಾನ ರಾಯಲ್ಸ್ ತಂಡ ಗೆಲುವಿನ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


