ಕ್ರಿಕೆಟ್

ಐಪಿಎಲ್ 2023: ಕೆಕೆಆರ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ 

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕ ರಶೀದ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಐಪಿಎಲ್ 2023: ಕೆಕೆಆರ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ 
ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ರಶೀದ್ ಖಾನ್
Published On :

ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ  ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್  ಟೈಟನ್ಸ್ ತಂಡದ ನಾಯಕ ರಶೀದ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. 

ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡುತ್ತಿಲ್ಲ. ಹಾರ್ದಿಕ್  ಪಾಂಡ್ಯ ಅನಾರೋಗ್ಯದ  ಇಂದಿನ ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ ವಿರುದ್ಧ ಗೆದ್ದಿರುವ ಗುಜರಾತ್, ಅಂಕಪಟ್ಟಿಯಲ್ಲಿ ಮರಳಿ ನಂಬರ್ 1 ಸ್ಥಾನ ಪಡೆಯಲು ಉತ್ಸುಕವಾಗಿದೆ. ಮತ್ತೊಂದೆಡೆ ಗುಜರಾತ್ ಟೈಟನ್ಸ್ ಬ್ರಾಬಲ್ಯ ಕೊನೆಗೊಳಿಸಲು ಮತ್ತು ಈ ಬಾರಿಯ ಐಪಿಎಲ್ ನಲ್ಲಿ ಎರಡನೇ ವಿಜಯವನ್ನು ದಾಖಲಿಸಲು ಕೆಕೆಆರ್ ಉತ್ಸುಕವಾಗಿದೆ.

ಟಾಸ್ ಗೆದ್ದ ಬಳಿಕ ಮಾತನಾಡಿದ ಗುಜರಾತ್ ಟೈಟನ್ಸ್ ನಾಯಕ ರಶೀದ್ ಖಾನ್, ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಉತ್ತಮವಾಗಿ ಆಡುವ ವಿಶ್ವಾಸವಿದೆ. ಹಾರ್ದಿಕ್ ಬದಲಿಗೆ ವಿಜಯ್ ಶಂಕರ್ ತಂಡದಲ್ಲಿರುವುದಾಗಿ ತಿಳಿಸಿದರು. 
ನಂತರ ಮಾತನಾಡಿದ ಕೆಕೆಆರ್  ನಾಯಕ ನಿತೀಶ್ ರಾಣಾ, ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಟಿಮ್ ಸೌಥಿ ಬದಲಿಗೆ ಫರ್ಗ್ಯುಸನ್ ಮತ್ತು ಮನದೀಪ್ ಸಿಂಗ್ ಬದಲಿಗೆ ಜಗದೀಶನ್ ತಂಡದಲ್ಲಿರುವುದಾಗಿ ತಿಳಿಸಿದರು. 

ಗುಜರಾತ್ ತಂಡ ಇಂತಿದೆ: ವೃದ್ಧಿಮಾನ್ ಸಹಾ, ಶುಭ್ ಮನ್  ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಲ್.

ಕೆಕೆಆರ್ ತಂಡ ಇಂತಿದೆ: ರಹಮಾನುಲ್ಲಾ ಗುರ್ಬಾಜ್,  ಎನ್ ಜಗದೀಸನ್, ನಿತೀಶ್ ರಾಣಾ, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಸುಯಶ್ ಶರ್ಮಾ, ಲಾಕಿ ಫರ್ಗುಸನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.