ಐಪಿಎಲ್ 2023: ಪಂಜಾಬ್ ವಿರುದ್ಧ ಹೈದರಾಬಾದ್ ತಂಡಕ್ಕೆ 8 ವಿಕೆಟ್ ಗೆಲುವು
ಹೈದರಾಬಾದ್ ನಲ್ಲಿ ನಡೆದ ಪಂಜಾಬ್- ಹೈದರಾಬಾದ್ ತಂಡಗಳ ನಡುವಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ಗಳ ಗೆಲುವು ಸಾಧಿಸಿದೆ.

ಹೈದರಾಬಾದ್: ಹೈದರಾಬಾದ್ ನಲ್ಲಿ ನಡೆದ ಪಂಜಾಬ್- ಹೈದರಾಬಾದ್ ತಂಡಗಳ ನಡುವಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ಗಳ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಸನ್ ರೈಸರ್ಸ್ ತಂಡ ಪಂಜಾಬ್ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 143 ರನ್ ಗಳಿಗೆ ಕಟ್ಟಿ ಹಾಕಿತು. ಶಿಖರ್ ಧವನ್ (66 ಎಸೆತಗಳಲ್ಲಿ 99) ಏಕಾಂಗಿ ಹೋರಾಟದ ಪರಿಣಾಮವಾಗಿ ಪಂಜಾಬ್ ತಂಡ 143 ರನ್ ಗಳಿಸಲು ಸಾಧ್ಯವಾಯಿತು. ಧವನ್ ಹೊರತುಪಡಿಸಿದರೆ ಸ್ಯಾಮ್ ಕರ್ರನ್ 22 ರನ್ ಗಳನ್ನು ಗಳಿಸಿದ್ದು ಹೊರತುಪಡಿಸಿದರೆ ಬಹುತೇಕ ಉಳಿದ ಎಲ್ಲಾ ಬ್ಯಾಟ್ಸ್ ಮನ್ ಗಳೂ 2 ಅಂಕಿ ರನ್ ಗಳಿಸಲು ಸಾಧ್ಯವಾಗದೇ ವಿಫಲರಾದರು.
ಹೈದರಾಬಾದ್ ತಂಡದ ಪರ ಮಯಾಂಕ್ ಮಾರ್ಕಾಂಡೆ 15 ರನ್ ನೀಡಿ 4 ವಿಕೆಟ್ ಗಳಿಸಿ ಅತ್ಯುತ್ತಮ ಬೌಲರ್ ಎನಿಸಿದರು. ಉಮ್ರನ್ ಮಲೀಕ್ 32 ರನ್ ನೀಡಿ 2 ವಿಕೆಟ್ ಗಳಿಸಿದರೆ, ಭುವನೇಶ್ವರ್ ಕುಮಾರ್ 33 ರನ್ ನೀಡಿ 1 ವಿಕೆಟ್, ಮಾರ್ಕೊ ಜಾನ್ಸೆನ್ 16 ರನ್ ನೀಡಿ 2 ವಿಕೆಟ್ ಗಳಿಸಿದರು.
ಪಂಜಾಬ್ ನೀಡಿದ ಗುರಿ ಬೆನ್ನತ್ತಿದ ಹೈದರಾಬಾದ್ ತಂಡಕ್ಕೆ ಆರಂಭದಲ್ಲೇ ಹ್ಯಾರಿ ಬ್ರೂಕ್ (14 ಎಸೆತಗಳಲ್ಲಿ 13 ರನ್) ವಿಕೆಟ್ ಉರುಳಿದ್ದು ಅಘಾತ ಉಂಟುಮಾಡಿತ್ತು. ಮತ್ತೋರ್ವ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ 20 ಎಸೆತಗಳಲ್ಲಿ 21 ರನ್ ಗಳಿಸಿದರೆ, ರಾಹುಲ್ ತ್ರಿಪಾಟಿ 48 ಎಸೆತಗಳಲ್ಲಿ 74 ರನ್ ಗಳಿಸಿ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಶಿಖರ್ ಧವನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. ಈ ಐಪಿಎಲ್ ಸೀಸನ್ ನಲ್ಲಿ ಹೈದರಾಬಾದ್ ತಂಡದ ಮೊದಲ ಗೆಲುವು ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


