IPL 2023: ಕೊಹ್ಲಿ, ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್; ಲಖನೌಗೆ 213 ರನ್ ಗಳ ಬೃಹತ್ ಗುರಿ!
IPL 2023ರ 15ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 212 ರನ್ ಪೇರಿಸಿದೆ.

ಬೆಂಗಳೂರು: IPL 2023ರ 15ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 212 ರನ್ ಪೇರಿಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ತಂಡ ಲಖನೌಗೆ ಗೆಲುವಿಗೆ 213 ರನ್‌ಗಳ ಗುರಿ ನೀಡಿದೆ.
ಬೆಂಗಳೂರು ಪರ ನಾಯಕ ಫಾಫ್ ಡು ಪ್ಲೆಸಿಸ್ (79*) ವಿರಾಟ್ ಕೊಹ್ಲಿ (61) ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ (59) ಅರ್ಧಶತಕ ಗಳಿಸಿದರು. ಟಾಪ್ 3 ಬ್ಯಾಟ್ಸ್‌ಮನ್‌ಗಳು 50ಕ್ಕೂ ಹೆಚ್ಚು ರನ್ ಗಳಿಸಿರುವುದು ಆರ್‌ಸಿಬಿಗೆ ಇದೇ ಮೊದಲು. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಡು ಪ್ಲೆಸಿಸ್ ಮೊದಲು ಕೊಹ್ಲಿಯೊಂದಿಗೆ 96 ರನ್ ಸೇರಿಸಿದರು, ನಂತರ ನಾಯಕ ಮ್ಯಾಕ್ಸ್‌ವೆಲ್ ಜೊತೆ ಶತಕದ ಜೊತೆಯಾಟ ನೀಡಿದರು. ಕೊನೆಯ 5 ಓವರ್‌ಗಳಲ್ಲಿ ಲಕ್ನೋ 75 ರನ್‌ಗಳನ್ನು ಚಚ್ಚಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


