ಕ್ರಿಕೆಟ್

ಐಪಿಎಲ್ 2023: ಕೊಹ್ಲಿ ಆಕರ್ಷಕ ಅರ್ಧಶತಕ, 23 ರನ್ ಗಳಿಂದ ಡೆಲ್ಲಿ ಬಗ್ಗುಬಡಿದ ಆರ್ ಸಿಬಿ!

ತವರು ನೆಲದಲ್ಲಿ ನಡೆದ 2023 ಐಪಿಎಲ್ 20ನೇ ಪಂದ್ಯದಲ್ಲಿ 23 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಬಗ್ಗು ಬಡಿದ ಬೆಂಗಳೂರು ರಾಯಲ್ಸ್ ಚಾಲೆಂಜರ್ಸ್ ತಂಡ ವಿಜಯದ ಕೇಕೆ ಹಾಕಿತು.

ಐಪಿಎಲ್ 2023: ಕೊಹ್ಲಿ ಆಕರ್ಷಕ ಅರ್ಧಶತಕ, 23 ರನ್ ಗಳಿಂದ ಡೆಲ್ಲಿ ಬಗ್ಗುಬಡಿದ ಆರ್ ಸಿಬಿ!
ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ
Published On :

ಬೆಂಗಳೂರು: ತವರು ನೆಲದಲ್ಲಿ ನಡೆದ 2023 ಐಪಿಎಲ್ 20ನೇ ಪಂದ್ಯದಲ್ಲಿ 23 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್  ಬಗ್ಗು ಬಡಿದ ಬೆಂಗಳೂರು ರಾಯಲ್ಸ್ ಚಾಲೆಂಜರ್ಸ್ ತಂಡ ವಿಜಯದ ಕೇಕೆ ಹಾಕಿತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ ಅಭಿಮಾನಿಗಳ ನಡುವೆ ಬೌಲಿಂಗ್ ಹಾಗೂ ಬ್ಯಾಟಿಂಗ್ ನಲ್ಲಿ ಅತ್ಯುತ್ತಮ ರೀತಿಯ ಪ್ರದರ್ಶನ ತೋರಿದ ಆರ್ ಸಿಬಿ ಆಟಗಾರರು, ಡೆಲ್ಲಿ ಕ್ಯಾಪಿಟಲ್ಸ್ ಮಣಿಸುವ ಮೂಲಕ ಗೆಲುವಿನ ಲಯಕ್ಕೆ ಮರಳಿದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಆರ್ ಸಿಬಿ ಪರ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ 50 ರನ್  ಗಳಿಸಿ, ಲಲಿತ್ ಯಾದವ್ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು.

ನಾಯಕ ಫಾಪ್ ಡು ಪ್ಲೆಸಿಸ್ 3 ಬೌಂಡರಿ, 1 ಸಿಕ್ಸರ್ ಸಿಡಿಸಿ 22 ರನ್ ಗಳಿಸಿದರೆ, ಮಹಿಪಲ್ ಲೊಮ್ರೊರ್ 26, ಗ್ಲೇನ್ ಮ್ಯಾಕ್ಸ್ ವೆಲ್ 24, ಹರ್ಷಲ್ ಪಟೇಲ್ 6, ಶಹಬಾಜ್ ಅಹ್ಮದ್ ಅಜೇಯ 20 ರನ್ ಗಳಿಸಿದರು. ದಿನೇಶ್ ಕಾರ್ತಿಕ್ ಶೂನ್ಯಕ್ಕೆ ಔಟಾದರೆ, ಅಂಜು ರಾವತ್ ಅಜೇಯ 15 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಮಿಚೆಲ್ ಮಾರ್ಷ್, ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ,  ಅಕ್ಷರ್ ಪಟೇಲ್ ಮತ್ತು ಲಲಿತ್ ಯಾದವ್ ತಲಾ 1 ವಿಕೆಟ್ ಪಡೆದರು.

ಆರ್ ಸಿಬಿ ನೀಡಿದ 175 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್  ನಿಗದಿತ ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 151 ರನ್ ಗಳಿಸಲಷ್ಟೇ ಶಕ್ತವಾಯಿತು. ಡೆಲ್ಲಿ ಪರ ಡೇವಿಡ್ ವಾರ್ನರ್ 19, ಮನೀಶ್ ಪಾಂಡೆ 50, ಅಕ್ಸರ್ ಪಟೇಲ್ 21, ಅಮನ್ ಹಕೀಂ ಖಾನ್ 18,ನಾರ್ಟೋಜ್ 23 ರನ್ ಗಳಿಸಿದರೆ, ಉಳಿದ ಯಾವುದೇ ಆಟಗಾರರು ಎರಡಂಕಿ ದಾಟಲಿಲ್ಲ. ಹೀಗಾಗಿ ಆರ್ ಸಿಬಿ ತಂಡ 23 ರನ್ ಗಳ ಅಂತರದಿಂದ ಗೆಲುವು ದಾಖಲಿಸಿತು.

ಇನ್ನೂ ಆರ್ ಸಿಬಿ ಪರ ವಿಜಯ್ ಕುಮಾರ್ ವೈಶಾಕ್ 3 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ 2, ವೈನೆ ಪರ್ನೆಲ್ , ಹಸರಂಗ ಡಿ ಸಿಲ್ವಾ, ಹರ್ಷಲ್ ಪಟೇಲ್ ತಲಾ 1 ವಿಕೆಟ್ ಪಡೆದರು. ವಿರಾಟ್ ಕೊಹ್ಲಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.