ಕ್ರಿಕೆಟ್

IPL 2023: ಕೊಹ್ಲಿ ಅರ್ಧ ಶತಕ: ಡೆಲ್ಲಿ ಕ್ಯಾಪಿಟಲ್ಸ್ ಗೆ 175 ರನ್ ಗುರಿ ನೀಡಿದ ಆರ್ ಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023)ರ 20ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ ಆರ್ ಸಿಬಿ 6 ವಿಕೆಟ್ ನಷ್ಟಕ್ಕೆ 174 ರನ್ ಪೇರಿಸಿದೆ.

IPL 2023: ಕೊಹ್ಲಿ ಅರ್ಧ ಶತಕ: ಡೆಲ್ಲಿ ಕ್ಯಾಪಿಟಲ್ಸ್ ಗೆ 175 ರನ್ ಗುರಿ ನೀಡಿದ ಆರ್ ಸಿಬಿ
ಕೊಹ್ಲಿ
Published On :

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023)ರ 20ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ ಆರ್ ಸಿಬಿ 6 ವಿಕೆಟ್ ನಷ್ಟಕ್ಕೆ 174 ರನ್ ಪೇರಿಸಿದೆ. 

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ ತಂಡ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಪೇರಿಸಿದ್ದು ಡೆಲ್ಲಿ ಕ್ಯಾಪಿಟಲ್ಸ್ ಗೆ ಗೆಲ್ಲಲು 175 ರನ್ ಗುರಿ ನೀಡಿದೆ. 

ಆರ್ ಸಿಬಿ ಪರ ವಿರಾಟ್ ಕೊಹ್ಲಿ 50, ಫಾಫ್ ಡುಪ್ಲೆಸಿಸ್ 22, ಮಹಿಪಾಲ್ 26, ಗ್ಲೇನ್ ಮ್ಯಾಕ್ಸ್ 24 ಮತ್ತು ಶಹಬಾಜ್ ಅಹ್ಮದ್ ಅಜೇಯ 20 ರನ್ ಪೇರಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ 4 ಪಂದ್ಯಗಳಲ್ಲಿ 4 ಸೋಲುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಡೇವಿಡ್ ವಾರ್ನರ್ ನೇತೃತ್ವದ ತಂಡ ತಮ್ಮ ಖಾತೆ ತೆರೆಯಲು ಬಯಸಿದೆ. ಆರ್‌ಸಿಬಿ ತಂಡ 3ರಲ್ಲಿ 1 ಪಂದ್ಯ ಗೆದ್ದು 7ನೇ ಸ್ಥಾನದಲ್ಲಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ತಂಡ ಎರಡನೇ ಗೆಲುವು ದಾಖಲಿಸಲು ಬಯಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.