ಸೌರವ್ ಗಂಗೂಲಿ ವಿರಾಟ್ ಕೊಹ್ಲಿಗೆ 'ಕೈ'ಕೊಡಲು ನಿರಾಕರಿಸಿದ್ರಾ? ವಿಡಿಯೋ ನೋಡಿ!
ಆರ್ ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಅರ್ಧಶತಕವನ್ನು ಆಕ್ರಮಣಕಾರಿಯಾಗಿ ಆಚರಿಸಿದ ನಂತರ ಮಾಜಿ ಬಿಸಿಸಿಐ ಅಧ್ಯಕ್ಷರು ಕೈಕುಲುಕಲು ನಿರಾಕರಿಸಿದ್ದರೂ ಎಂದು ವರದಿಯಾಗುತ್ತಿದೆ.

ಬೆಂಗಳೂರು: ಆರ್ ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಅರ್ಧಶತಕವನ್ನು ಆಕ್ರಮಣಕಾರಿಯಾಗಿ ಆಚರಿಸಿದ ನಂತರ ಮಾಜಿ ಬಿಸಿಸಿಐ ಅಧ್ಯಕ್ಷರು ಕೈಕುಲುಕಲು ನಿರಾಕರಿಸಿದ್ದರೂ ಎಂದು ವರದಿಯಾಗುತ್ತಿದೆ.
ಡೆಲ್ಲಿ ಕ್ಯಾಪಿಟಲ್ಸ್ ಸತತ 5ನೇ ಸೋಲನ್ನು ಅನುಭವಿಸಿದ ಕಾರಣ ಗಂಗೂಲಿ ಹತಾಶೆಯಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 23 ರನ್‌ಗಳ ಜಯ ಸಾಧಿಸಿತ್ತು. ಇನ್ನು ವಿರಾಟ್ ಕೊಹ್ಲಿ 47ನೇ ಐಪಿಎಲ್ ಅರ್ಧಶತಕದ ಸಂಭ್ರಮಾಚರಣೆ ಡೆಲ್ಲಿ ಕ್ಯಾಪಿಟಲ್ಸ್ ಗೆ ಗಾಯಗಳಿಗೆ ಉಪ್ಪು ಸವರಿದಂತಾಗಿತ್ತು.
ಆರ್ ಸಿಬಿ ನೀಡಿ 175 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಇತ್ತು. ಡೆಲ್ಲಿ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನದಿಂದ ಅಸಮಾಧಾನಗೊಂಡಿದ್ದ ಗಂಗೂಲಿಯನ್ನು ಬೌಂಡರಿ ಗೆರೆಯ ಬಳಿಯಿದ್ದ ವಿರಾಟ್ ಕೊಹ್ಲಿ ನೋಡಿದರು. ಇದು ಸಹ ಗಂಗೂಲಿಯ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಆರ್ ಸಿಬಿ ಪಂದ್ಯ ಗೆದ್ದ ನಂತರ ಉಭಯ ತಂಡಗಳ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳು ಕ್ರೀಡಾಸ್ಫೂರ್ತಿ ತೋರಲು ಹಸ್ತಲಾಘವ ಮಾಡಿದರು. ಆದರೆ, ಈ ವೇಳೆ ವಿರಾಟ್ ಕೊಹ್ಲಿ ಮತ್ತು ಗಂಗೂಲಿ ಕೈಕುಲುಕದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆಟಗಾರರನ್ನು ಭೇಟಿ ಮಾಡಲು ಗಂಗೂಲಿ ಸರದಿ ಸಾಲಿನಲ್ಲಿ ಮುಂದೆ ಹೋಗುತ್ತಿದ್ದರು. ಈ ವೇಳೆ ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರೊಂದಿಗೆ ಸಂಭಾಷಣೆಯಲ್ಲಿ ತೊಡಗಿದ್ದರು. ಈ ವೇಳೆ ಗಂಗೂಲಿ ವಿರಾಟ್ ಕೊಹ್ಲಿಯನ್ನು ಬಿಟ್ಟು ಮುಂದೆ ಹೋಗಿ ಇತರೆ ಆಟಗಾರರೊಂದಿಗೆ ಶೇಕ್ ಹ್ಯಾಂಡ್ ಮಾಡಿದರು. ಇದೀಗ ಈ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಕೆಲವು ಅಭಿಮಾನಿಗಳು ಕೊಹ್ಲಿ ಉದ್ದೇಶಪೂರ್ವಕವಾಗಿ ಗಂಗೂಲಿಯನ್ನು ನಿರ್ಲಕ್ಷಿಸಿದ್ದಾರೆ ಎಂದು ಪ್ರತಿಕ್ರಿಯಿಸಿದರೆ, ಇನ್ನು ಕೆಲವರು ಕೊಹ್ಲಿ ಪಾಂಟಿಂಗ್ ಅವರೊಂದಿಗೆ ಮಾಡನಾಡುತ್ತಿದ್ದರಿಂದ ಕಾಕತಾಳೀಯವಾಗಿ ಮಿಸ್ ಆಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


