ಐಪಿಎಲ್ 2023: ಕೊಹ್ಲಿ ನಾಯಕತ್ವದ ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಮೊದಲಿಗೆ ಬೌಲಿಂಗ್ ಆಯ್ಕೆ
ಪಂಜಾಬಿನ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಸೆಣಸಾಟ ನಡೆಸುತ್ತಿದೆ.

ಪಂಜಾಬ್: ಪಂಜಾಬಿನ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಸೆಣಸಾಟ ನಡೆಸುತ್ತಿದೆ.
ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿಆರ್ ಸಿಬಿ ತಂಡವನ್ನು ಮುನ್ನಡೆಸುತ್ತಿದ್ದು, ಟಾಸ್ ಗಾಗಿ ಕೊಹ್ಲಿ ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಂತೆಯೇ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತು. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಶಿಖರ್ ಧವನ್ ಗಾಯಗೊಂಡು ಸ್ಯಾಮ್ ಕರನ್ ಪಂಜಾಬ್ ತಂಡದ ನಾಯಕರಾಗಿದ್ದಾರೆ.
ಟಾಸ್ ಸಂದರ್ಭದಲ್ಲಿ ಮಾತನಾಡಿದ ಕರನ್, ಕಳೆದ ಪಂದ್ಯದಲ್ಲಿ ಆದ್ದಂತೆ ಇಂದಿನ ಪಂದ್ಯದಲ್ಲಿಯೂ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದರು. ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿ, ಫಾಪ್ ಡು ಪ್ಲೆಸಿಸ್ ವೈಶಾಕ್ ಜೊತೆಗೆ ಬ್ಯಾಟಿಂಗ್ ಮಾಡಲಿದ್ದಾರೆ ಎಂದು ತಿಳಿಸಿದರು.
ಪಂಜಾಬ್ ಕಿಂಗ್ಸ್ ತಂಡ ಇಂತಿದೆ: ಅಥರ್ವ ಟೈಡೆ, ಹರ್‌ಪ್ರೀತ್ ಭಾಟಿಯಾ, ಮ್ಯಾಥ್ಯೂ ಶಾರ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಸ್ಯಾಮ್ ಕರಾನ್ (ನಾಯಕ), ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್
ಆರ್ ಸಿಬಿ ತಂಡ ಇಂತಿದೆ: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವೇಯ್ನ್ ಪಾರ್ನೆಲ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


