IPL 2023: ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್; ರಾಜಸ್ತಾನಕ್ಕೆ 190 ರನ್ ಗುರಿ ನೀಡಿದ ಆರ್ ಸಿಬಿ
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 32ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 189 ರನ್ ಪೇರಿಸಿದೆ.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2023ರ 32ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 189 ರನ್ ಪೇರಿಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದರು. ಈ ಪಂದ್ಯದಲ್ಲೂ ಆರ್‌ಸಿಬಿ ನಾಯಕತ್ವವನ್ನು ವಿರಾಟ್ ಕೊಹ್ಲಿ ವಹಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡುತ್ತಿದೆ.
ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿಂದ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿ ಪೆವಿಲಿಯನ್ ಪೇರಿಸಿದರು. ನಂತರ ಬಂದ ಶಹಬಾಜ್ ಅಹ್ಮದ್ ಸಹ ಎರಡು ರನ್ ಗಳಿಸಿ ಔಟಾದರು. ಈ ವೇಳೆ ಜೊತೆಯಾದ ಫಾಫ್ ಡುಪ್ಲೆಸಿಸ್ (62) ಮತ್ತು ಗ್ಲೇನ್ ಮ್ಯಾಕ್ಸ್ ವೆಲ್ (77) ರನ್ ಗಳ ಭರ್ಜರಿ ಬ್ಯಾಟಿಂಗ್ ಮಾಡಿದ್ದು ತಂಡದ ಸ್ಪರ್ಧಾತ್ಮಕ ರನ್ ಕಲೆಹಾಕಲು ಸಾಧ್ಯವಾಯಿತು.
ರಾಜಸ್ಥಾನ ರಾಯಲ್ಸ್ ಪರ ಟ್ರೆಂಟ್ ಬೌಲ್ಟ್ ಮತ್ತು ಸಂದೀಪ್ ಶರ್ಮಾ ತಲಾ 2 ವಿಕೆಟ್ ಪಡೆದರೆ, ಅಶ್ವಿನ್ ಮತ್ತು ಚಹಾಲ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


