2ನೇ ಟಿ20: ವೆಸ್ಟ್ ಇಂಡೀಸ್ ವಿರುದ್ಧ ಮತ್ತೆ ಭಾರತಕ್ಕೆ ಸೋಲು
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಭಾರತ ಮುಗ್ಗರಿಸಿದ್ದು, ಟೀಂ ಇಂಡಿಯಾ ವಿರುದ್ಧ ವಿಂಡೀಸ್ ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.

ಗಯಾನ: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಭಾರತ ಮುಗ್ಗರಿಸಿದ್ದು, ಟೀಂ ಇಂಡಿಯಾ ವಿರುದ್ಧ ವಿಂಡೀಸ್ ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.
ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಎದುರು ಭಾರತ ಪರಾಭವಗೊಂಡಿದೆ. ಭಾರತ ನೀಡಿದ 153 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ವೆಸ್ಟ್ ಇಂಡೀಸ್ ತಂಡ 18.5 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿ 2 ವಿಕೆಟ್ ಅಂತರದ ರೋಚಕ ಜಯ ಸಾಧಿಸಿತು.
ವಿಂಡೀಸ್ ಪರ ನಿಕೋಲಸ್ ಪೂರನ್ 40 ಎಸೆತಗಳಲ್ಲಿ 67 ರನ್ ಸಿಡಿಸಿ ವಿಂಡೀಸ್ ಗೆಲುವಿನಲ್ಲಿ ಮಹತ್ತರ ಪಾತ್ರ ನಿರ್ವಹಿಸಿದರು. ಒಂದೆಡೆ ವಿಕೆಟ್ ಗಳು ಉರುಳುತ್ತಿದ್ದರೂ, ನಾಯಕ ರೋವ್ಮನ್ ಪೊವೆಲ್ (21 ರನ್) ಮತ್ತು ಶಿಮ್ರಾನ್ ಹೇಟ್ಮೆಯರ್ (22 ರನ್) ಅಂತಿಮ ಹಂತದಲ್ಲಿ ತಂಡಕ್ಕೆ ನೆರವಾದರು. ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡ 18.5 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿ 2 ವಿಕೆಟ್ ಅಂತರದ ರೋಚಕ ಜಯ ಸಾಧಿಸಿತು. ಆ ಮೂಲಕ ಟಿ20 ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 152 ರನ್‌ಗಳ ಮೊತ್ತ ಗಳಿಸಿತು. ಭಾರತದ ಪರ ತಮ್ಮ ವೃತ್ತಿಜೀವನದಲ್ಲಿ ಎರಡನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದ ತಿಲಕ್ ವರ್ಮಾ ಅರ್ಧಶತಕಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


