ಕ್ರಿಕೆಟ್

2ನೇ ಟಿ20: ಐರ್ಲೆಂಡ್ ವಿರುದ್ಧ 2-0 ಮುನ್ನಡೆ ಸಾಧಿಸಿದ ಭಾರತಕ್ಕೆ 33 ರನ್ ಜಯ

2ನೇ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಭಾರತ ಐರ್ಲೆಂಡ್ ವಿರುದ್ಧ 33 ರನ್ ಗಳ ಜಯ ಗಳಿಸಿದ್ದು ಸರಣಿಯಲ್ಲಿ 2-0 ಮುನ್ನಡೆ ಕಾಯ್ದುಕೊಂಡಿದೆ.

2ನೇ ಟಿ20: ಐರ್ಲೆಂಡ್ ವಿರುದ್ಧ 2-0 ಮುನ್ನಡೆ ಸಾಧಿಸಿದ ಭಾರತಕ್ಕೆ 33 ರನ್ ಜಯ
ಐರ್ಲೆಂಡ್ ವಿರುದ್ಧ ಭಾರತಕ್ಕೆ ಭಾರತಕ್ಕೆ 33 ರನ್ ಗಳ ಜಯ
Published On :

ಐರ್ಲೆಂಡ್: 2ನೇ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಭಾರತ ಐರ್ಲೆಂಡ್ ವಿರುದ್ಧ 33 ರನ್ ಗಳ ಜಯ ಗಳಿಸಿದ್ದು ಸರಣಿಯಲ್ಲಿ 2-0 ಮುನ್ನಡೆ ಕಾಯ್ದುಕೊಂಡಿದೆ. 

ಮೂರು ಪಂದ್ಯಗಳ ಸರಣಿ ಇದಾಗಿದ್ದು ಭಾರತ ಸರಣಿಯಲ್ಲಿ ಪ್ರಾಬಲ್ಯ ಸಾಧಿಸಿದೆ. ಮೊದಲು ಬ್ಯಾಟಿಮ್ಗ್ ಮಾಡಿದ ಭಾರತ 5 ವಿಕೆಟ್ ಗಳ ನಷ್ಟಕ್ಕೆ 185 ರನ್ ಗಳನ್ನು ಗಳಿಸಿ ಗಳಿಸಿತು. ಉಪನಾಯಕ ರಿತುರಾಜ್ ಗಾಯಕ್ವಾಡ್ 42 ಎಸೆತಗಳಲ್ಲಿ 58 ರನ್ ಗಳಿಸಿದರೆ, ಸಂಜು ಸ್ಯಾಮ್ಸನ್ 26 ಎಸೆತಗಳಲ್ಲಿ 40 ರನ್ ಗಳಿಸಿದರು. ಹಾಗೂ ರಿಂಕು ಸಿಂಗ್ 21 ಎಸೆತಗಳಲ್ಲಿ 38 ರನ್ ಗಳಿಸಿದರು.

ಭಾರತದ ಸವಾಲನ್ನು ಬೆನ್ನಟ್ಟಿದ ಐರ್ಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ಭಾರತದ ಬೌಲರ್ ಗಳಾದ ರವಿ ಬಿಷ್ಣೋಯ್ 37 ರನ್ ನೀಡಿ 2 ವಿಕೆಟ್ ಗಳಿಸಿದರೆ, ಪ್ರಸಿದ್ಧ್ ಕೃಷ್ಣ 29 ರನ್ ನೀಡಿ 2 ವಿಕೆಟ್ ಗಳಿಸಿದರು. ನಾಯಕ ಜಸ್ಪ್ರಿತ್ ಬೂಮ್ರಾ 15 ರನ್ ನೀಡಿ 2 ವಿಕೆಟ್ ಗಳಿಸಿದರು.
 
ಐರ್ಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಡಕ್ವರ್ತ್ ನಿಯಮ ಮೂಲಕ ಭಾರತ 2 ರನ್ ಗಳಿಂದ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.