ಐಎಸ್ ಪಿಎಲ್ ನ ಮುಂಬೈ ತಂಡದ ಮಾಲೀಕತ್ವ ಪಡೆದ ಬಿಗ್ ಬಿ ಅಮಿತಾಬ್ ಬಚ್ಚನ್
ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಸೋಮವಾರ ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ (ISPL) ನ ಮುಂಬೈ ತಂಡದ ಮಾಲೀಕರಾಗಿ ಘೋಷಿಸಿಕೊಂಡಿದ್ದಾರೆ.

ಮುಂಬೈ: ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಸೋಮವಾರ ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ (ISPL) ನ ಮುಂಬೈ ತಂಡದ ಮಾಲೀಕರಾಗಿ ಘೋಷಿಸಿಕೊಂಡಿದ್ದಾರೆ.
ISPL ಭಾರತದ ಮೊದಲ ಟೆನಿಸ್ ಬಾಲ್ ಟಿ10 ಕ್ರಿಕೆಟ್ ಪಂದ್ಯಾವಳಿಯಾಗಿದ್ದು, ಇದನ್ನು ಕ್ರೀಡಾಂಗಣದೊಳಗೆ ಆಡಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಇದರ ಉದ್ಘಾಟನಾ ಆವೃತ್ತಿ ಪಂದ್ಯ ಮಾರ್ಚ್ 2 ರಿಂದ ಮಾರ್ಚ್ 9 ರವರೆಗೆ ಮುಂಬೈನಲ್ಲಿ ನಡೆಯಲಿದೆ. ಪಂದ್ಯಾವಳಿಯಲ್ಲಿ 19 ಪಂದ್ಯಗಳು ನಡೆಯಲಿದ್ದು, ಹೈದರಾಬಾದ್, ಮುಂಬೈ, ಬೆಂಗಳೂರು, ಚೆನ್ನೈ, ಕೋಲ್ಕತ್ತಾ ಮತ್ತು ಶ್ರೀನಗರ ಆರು ತಂಡಗಳ ಶ್ರೇಣಿಯನ್ನು ಹೊಂದಿದೆ. ಲೀಗ್‌ನ ಭಾಗವಾಗಿರುವುದು ನನಗೆ ಹೊಸ ಆರಂಭ ಸೂಚನೆಯಾಗಿದ್ದು ಸಂತಸ ತಂದಿದೆ ಎಂದು ಅಮಿತಾಬ್ ಬಚ್ಚನ್ ತಿಳಿಸಿದ್ದಾರೆ.
ಐಎಸ್‌ಪಿಎಲ್ ಒಂದು ರೋಚಕ ಮತ್ತು ಉದಾತ್ತ ಪರಿಕಲ್ಪನೆ ಎಂದು ಬಣ್ಣಿಸಿದರು. ಬೀದಿಗಳಲ್ಲಿ, ಗಲ್ಲಿಗಳಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ ಮತ್ತು ಕ್ರಿಕೆಟ್ ಆಡಲು ಹೋಮ್ ಮೇಡ್ ಪಿಚ್‌ಗಳನ್ನು ಮಾಡಿದವರಿಗೆ ಈಗ ವೃತ್ತಿಪರವಾಗಿ ತಂಡಕ್ಕೆ ಆಯ್ಕೆಯಾಗಲು ಮತ್ತು ವಿಶ್ವದಾದ್ಯಂತ ಲಕ್ಷಾಂತರ ಜನರ ಮುಂದೆ ಔಪಚಾರಿಕ ಸೆಟಪ್‌ಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಒಂದು ಅವಕಾಶ!" ಎಂದು ಅಮಿತಾಬ್ ಬಚ್ಚನ್ ಇಂದು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ನಟರಾದ ಅಕ್ಷಯ್ ಕುಮಾರ್ ಮತ್ತು ಹೃತಿಕ್ ರೋಷನ್ ಅವರು ಕ್ರಮವಾಗಿ ಶ್ರೀನಗರ ಮತ್ತು ಬೆಂಗಳೂರಿನ ತಂಡದ ಮಾಲೀಕರು ಎಂದು ಘೋಷಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


