ಭಾರತದ ಸರಣಿಗೂ ಮುನ್ನವೇ ಆಸ್ಟ್ರೇಲಿಯಾಗೆ ಡಬಲ್ ಆಘಾತ: ಸ್ಟಾರ್ಕ್ ಬಳಿಕ ಮತ್ತೊಬ್ಬ ಸ್ಟಾರ್ ವೇಗಿ ಟೆಸ್ಟ್‌ನಿಂದ ಹೊರಕ್ಕೆ
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬಂದಿಳಿದಿದೆ. ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ತಂಡ ತಯಾರಿ ಆರಂಭಿಸಿದೆ.

ನವದೆಹಲಿ: ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬಂದಿಳಿದಿದೆ. ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ತಂಡ ತಯಾರಿ ಆರಂಭಿಸಿದೆ.
ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ಫೆಬ್ರವರಿ 9 ರಂದು ನಡೆಯಲಿದ್ದು ಭಾರತಕ್ಕೆ ಪೈಪೋಟಿ ನೀಡಲು ಆಟಗಾರರು ಸಿದ್ಧತೆ ನಡೆಸಿದ್ದಾರೆ. ಆದರೆ ಅದಕ್ಕೂ ಮುನ್ನ ಆಸ್ಟ್ರೇಲಿಯಾಕ್ಕೆ ಎರಡು ಡಬಲ್ ಆಘಾತ ಎದುರಾಗಿದೆ. ತಂಡದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಈಗಾಗಲೇ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಈಗ ಮತ್ತೊಬ್ಬ ಆಟಗಾರ ಸಹ ಹೊರಗುಳಿದಿದ್ದಾರೆ.
ಗಾಯದಿಂದ ಚೇತರಿಸಿಕೊಂಡಿಲ್ಲ ಹೇಜಲ್‌ವುಡ್!
ಮಿಚೆಲ್ ಸ್ಟಾರ್ಕ್ ಜೊತೆಗೆ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಕೂಡ ಭಾರತದ ವಿರುದ್ಧ ಮೊದಲ ಟೆಸ್ಟ್ ಗೆ ಅಲಭ್ಯರಾಗಿದ್ದಾರೆ. ಕಳೆದ ತಿಂಗಳು ಸಿಡ್ನಿ ಟೆಸ್ಟ್ ವೇಳೆ ಎಡಗಾಲಿಗೆ ಗಾಯವಾಗಿತ್ತು. ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹ್ಯಾಜಲ್‌ವುಡ್ ತಂಡದ ಸರಣಿ ಪೂರ್ವ ತಯಾರಿ ಶಿಬಿರದಲ್ಲಿ ತರಬೇತಿ ಪಡೆಯುತ್ತಿಲ್ಲ. ಅವರು ಸಹ ಆಟಗಾರರಿಗೆ ಸಹಾಯ ಮಾಡುವುದನ್ನು ಮಾತ್ರ ಕಾಣಬಹುದಾಗಿದೆ. ಎರಡನೇ ಟೆಸ್ಟ್ ಫೆಬ್ರವರಿ 17ರಿಂದ ದೆಹಲಿಯಲ್ಲಿ ನಡೆಯಲಿದೆ.
ಗಾಯಕೊಂಡಿರುವ ಸ್ಟಾರ್ಕ್
ತಂಡದ ಪ್ರಮುಖ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಕೂಡ ಗಾಯಗೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಸ್ಟಾರ್ಕ್ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದರು. ಇದರಿಂದಾಗಿ ಅವರು ಭಾರತ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ. ಈ ಇಬ್ಬರೂ ಬೌಲರ್‌ಗಳು ಔಟಾದರೆ ಸ್ಕಾಟ್ ಬೋಲ್ಯಾಂಡ್‌ಗೆ ಅವಕಾಶ ಸಿಗಬಹುದು. ಅವರು ಪ್ಯಾಟ್ ಕಮಿನ್ಸ್ ಜೊತೆಗೆ ತಂಡದಲ್ಲಿ ಎರಡನೇ ವೇಗದ ಬೌಲರ್ ಆಗಿರಬಹುದು.
ಆಸ್ಟ್ರೇಲಿಯಾ ಟೆಸ್ಟ್ ತಂಡ:
ಪ್ಯಾಟ್ ಕಮ್ಮಿನ್ಸ್ (ಸಿ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಆಷ್ಟನ್ ಅಗರ್, ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


