ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಭಾರತಕ್ಕೆ ಅಗ್ರಸ್ಥಾನ: ತಾಂತ್ರಿಕ ದೋಷ, ಐಸಿಸಿ ಕ್ಷಮೆಯಾಚನೆ
ಪುರುಷರ ಟೆಸ್ಟ್ ತಂಡದ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಬದಲು ಭಾರತ ನಂಬರ್ 1 ಎಂದು ತಾಂತ್ರಿಕ ದೋಷದಿಂದ ಆದ ಪ್ರಮಾದಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಕ್ಷಮೆಯಾಚಿಸಿದೆ.

ದುಬೈ: ಪುರುಷರ ಟೆಸ್ಟ್ ತಂಡದ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಬದಲು ಭಾರತ ನಂಬರ್ 1 ಎಂದು ತಾಂತ್ರಿಕ ದೋಷದಿಂದ ಆದ ಪ್ರಮಾದಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಕ್ಷಮೆಯಾಚಿಸಿದೆ.
ಭಾರತ ಟೆಸ್ಟ್ ಶ್ರೇಯಾಂಕದಲ್ಲಿ 'ಅಗ್ರಸ್ಥಾನ' ಪಡೆದ ಕೆಲವೇ ಗಂಟೆಗಳ ನಂತರ ಐಸಿಸಿ ಮತ್ತೊಂದು ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿತು. ಇದರಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಎರಡನೇ ಸ್ಥಾನಕ್ಕೆ ಮರಳಿದೆ.
ನಾಗ್ಪುರದಲ್ಲಿ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ತನ್ನ ಇನ್ನಿಂಗ್ಸ್ ಮತ್ತು 132 ರನ್‌ಗಳ ಜಯದ ನಂತರ ಪ್ರಕಟಗೊಂಡ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಭಾರತ ಅಗ್ರಸ್ಥಾನಕ್ಕೇರಿದೆ ಎಂಬ ಭಾವ ಕೆಲ ಹೊತ್ತು ಮನೆ ಮಾಡಿತ್ತು.
ಗುರುವಾರ ತಾಂತ್ರಿಕ ದೋಷವನ್ನು ಐಸಿಸಿ ಒಪ್ಪಿಕೊಂಡಿದ್ದು, ಫೆಬ್ರವರಿ 15 ರಂದು ತಾಂತ್ರಿಕ ದೋಷದಿಂದಾಗಿ ತನ್ನ ವೆಬ್ ಸೈಟ್ ನಲ್ಲಿ ಸ್ವಲ್ಪ ಹೊತ್ತಿನವರೆಗೂ ಭಾರತ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿರುವುದಾಗಿ ತಪ್ಪಾಗಿ ಪ್ರದರ್ಶಿಸಲಾಗಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.
ವೆಸ್ಟ್ ಇಂಡೀಸ್ ವಿರುದ್ಧ ಜಿಂಬಾಬ್ವೆಯ ಎರಡು ಪಂದ್ಯಗಳ ಸರಣಿ ಮುಕ್ತಾಯದ ನಂತರ ಆಸ್ಟ್ರೇಲಿಯಾ ತಂಡ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆಯಲಿದೆ. ಆಸ್ಟ್ರೇಲಿಯಾ 126 ರೇಟಿಂಗ್ ನಲ್ಲಿ ಅಗ್ರಸ್ಥಾನದಲ್ಲಿದ್ದರೆ ಭಾರತ 115 ರೇಟಿಂಗ್ ನಲ್ಲಿ ಎರಡನೇ ಸ್ಥಾನದಲ್ಲಿರುವುದಾಗಿ ಎಂದು ಐಸಿಸಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


