ಟಿ20 ಕ್ರಿಕೆಟ್ ನಲ್ಲಿ ಎರಡು ದಾಖಲೆ ಬರೆದ ಹರ್ಮನ್‌ಪ್ರೀತ್ ಕೌರ್!
ಐಸಿಸಿ ಮಹಿಳಾ ಟಿ20 ವಿಶ್ವಕಪ್ 2023ರಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳಿಗೆ ಇದು ಕೊನೆಯ ಗುಂಪು ಹಂತದ ಪಂದ್ಯವಾಗಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2023ರಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳಿಗೆ ಇದು ಕೊನೆಯ ಗುಂಪು ಹಂತದ ಪಂದ್ಯವಾಗಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.
ಹರ್ಮನ್‌ಪ್ರೀತ್ ಅವರ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದ 150ನೇ ಪಂದ್ಯ ಇದಾಗಿದ್ದು ಇನ್ನು 150 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಹರ್ಮನ್‌ಪ್ರೀತ್ ನಂತರ, 'ಹಿಟ್‌ಮ್ಯಾನ್' ರೋಹಿತ್ ಶರ್ಮಾ ಅವರ ಹೆಸರು ಹೆಚ್ಚು ಟಿ20ಐ ಪಂದ್ಯಗಳನ್ನು ಆಡಿದ ಕ್ರಿಕೆಟಿಗರ ಪಟ್ಟಿಯಲ್ಲಿದೆ. ಭಾರತೀಯ ಪುರುಷರ ಕ್ರಿಕೆಟ್ ತಂಡದ ನಿಯಮಿತ ನಾಯಕ ರೋಹಿತ್ ಇದುವರೆಗೆ 148 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದರೆ, ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಸುಜಿ ಬೇಟ್ಸ್ 143 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
2009ರಲ್ಲಿ ಹರ್ಮನ್‌ಪ್ರೀತ್ ತನ್ನ T20 ಅಂತಾರಾಷ್ಟ್ರೀಯ ಪದಾರ್ಪಣೆ ಮಾಡಿದ್ದರು. ಅವರು ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಆಡಿದ್ದು ಕೇವಲ 8 ರನ್ ಗಳಿಸಿದರು. ಆದಾಗ್ಯೂ, ಹರ್ಮನ್‌ಪ್ರೀತ್ ಕಳಪೆ ಆರಂಭದ ಹೊರತಾಗಿಯೂ ಸಕಾರಾತ್ಮಕ ಮನೋಭಾವವನ್ನು ಉಳಿಸಿಕೊಂಡರು. ಟಿ20 ಮಾದರಿಯಲ್ಲಿ 149 ಪಂದ್ಯಗಳಲ್ಲಿ 27.97 ಸರಾಸರಿಯಲ್ಲಿ 2,993 ರನ್ ಗಳಿಸಿದ್ದರು. ಈ ಮಾದರಿಯಲ್ಲಿ ಅವರು ಒಂದು ಶತಕ ಮತ್ತು 9 ಅರ್ಧ ಶತಕಗಳನ್ನು ಗಳಿಸಿದ್ದಾರೆ.
ಇದೀಗ 150ನೇ ಪಂದ್ಯದಲ್ಲಿ ಹರ್ಮನ್‌ಪ್ರೀತ್ 13 ರನ್ ಬಾರಿಸುವ ಮೂಲಕ 3000 ರನ್‌ಗಳ ಗಡಿ ದಾಡಿಟ್ಟು ವಿಶ್ವದ ನಾಲ್ಕನೇ ಮಹಿಳಾ ಕ್ರಿಕೆಟಿಗರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


