2023 ವಿಶ್ವಕಪ್ ವೇಳೆಗೆ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಪ್ರತಿಮೆ ಅನಾವರಣ
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ತೆಂಡೊಲ್ಕರ್ ಅವರ ಪ್ರತಿಮೆಯನ್ನು ಶೀಘ್ರದಲ್ಲೇ ನೋಡಲಿದ್ದಾರೆ. ಮಂಗಳವಾರ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಮೋಲ್ ಕಾಳೆ ಈ ವಿಷಯ ಪ್ರಕಟಿಸಿದ್ದಾರೆ.

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ತೆಂಡೊಲ್ಕರ್ ಅವರ ಪ್ರತಿಮೆಯನ್ನು ಶೀಘ್ರದಲ್ಲೇ ನೋಡಲಿದ್ದಾರೆ. ಮಂಗಳವಾರ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಮೋಲ್ ಕಾಳೆ ಈ ವಿಷಯ ಪ್ರಕಟಿಸಿದ್ದಾರೆ.
ಪ್ರಸಿದ್ಧ ಸ್ಟೇಡಿಯಂನಲ್ಲಿ ಇದೇ ಮೊದಲ ಬಾರಿಗೆ ಆಟಗಾರರೊಬ್ಬರ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ. 2023ರ ವಿಶ್ವಕಪ್ ಹೊತ್ತಿಗೆ ಈ ಪ್ರತಿಮೆ ಅನಾವರಣಗೊಳ್ಳಲಿದೆ. ವಾಂಖೆಡೆಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅವರ ಸುವರ್ಣ ಮಹೋತ್ಸವ ಆಚರಣೆ ಭಾಗವಾಗಿ ಎಂಸಿಎ ಹೊರಗೆ ವೃತ್ತಾಕಾರದ ವೇದಿಕೆಯಲ್ಲಿ ಸಚಿನ್ ಪ್ರತಿಮೆ ನಿರ್ಮಿಸಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿನ್ ತೆಂಡೊಲ್ಕರ್, ನನ್ನ ವೃತ್ತಿ ಜೀವನ ಈ ಮೈದಾನದಿಂದ ಪ್ರಾರಂಭವಾಗಿತ್ತು. ನನ್ನ ಜೀವನದ ಅತಿದೊಡ್ಡ ಕ್ರಿಕೆಟ್ ಕ್ಷಣವೆಂದರೆ 2011ರಲ್ಲಿ ನಾವು ವಿಶ್ವ ಕಪ್ ನಲ್ಲಿ ಗೆಲುವು ಸಾಧಿಸಿದ್ದು, ನಾನು ಕೊನೆಯ ಪಂದ್ಯವನ್ನು 2013ರಲ್ಲಿ ಆಡಿದ್ದು, ಹೆಚ್ಚಿನ ನನ್ನ ನೆನಪುಗಳು ಈ ಕ್ರೀಡಾಂಗಣದಲ್ಲಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


