ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ; 1-0 ಮುನ್ನಡೆ
ಮುಂಬೈ ನಲ್ಲಿ ನಡೆದ ಭಾರತ-ಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ಪ್ರವಾಸಿ ತಂಡವನ್ನು 2 ರನ್ ಗಳ ಅಂತರದಿಂದ ಮಣಿಸಿ ರೋಚಕ ಜಯವನ್ನು ತನ್ನದಾಗಿಸಿಕೊಂಡಿದೆ.

ಮುಂಬೈ: ಮುಂಬೈ ನಲ್ಲಿ ನಡೆದ ಭಾರತ-ಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ಪ್ರವಾಸಿ ತಂಡವನ್ನು 2 ರನ್ ಗಳ ಅಂತರದಿಂದ ಮಣಿಸಿ ರೋಚಕ ಜಯವನ್ನು ತನ್ನದಾಗಿಸಿಕೊಂಡಿದೆ.
ಆರಂಭದಲ್ಲಿ ಲಂಕಾ ಪಂದ್ಯದ ಮೇಲೆ ಉತ್ತಮ ಹಿಡಿತ ಸಾಧಿಸಿತ್ತು. ಆದರೆ ಶಿವಂ ಮಾವಿ ಅವರ ಬೌಲಿಂಗ್ ನಿಂದಾಗಿ ಕೊನೆಯ ಕ್ಷಣದಲ್ಲಿ ಲಂಕಾ ಪಂದ್ಯದ ಮೇಲಿನ ಹಿಡಿತವನ್ನು ಕಳೆದುಕೊಂಡಿತ್ತು.
ಭಾರತ ನೀಡಿದ್ದ 163 ರನ್ ಗಳ ಗುರಿಯನ್ನು ಬೆನ್ನಟ್ಟಿದ ಲಂಕಾ ಪಡೆಗೆ ಕೊನೆಯ ಓವರ್ ವೇಳೆಗೆ ಗೆಲ್ಲುವುದಕ್ಕೆ 13 ರನ್ ಗಳ ಅಗತ್ಯವಿತ್ತು. ಅಕ್ಷರ್ ಪಟೇಲ್ ಅವರು ಎಸೆದ ಕೊನೆಯ ಓವರ್ ನಲ್ಲಿ ಮೊದಲ 2 ಎಸೆತಗಳಲ್ಲಿ ತಲಾ ಒಂದು ರನ್ ಮೂರನೇ ಎಸೆತದಲ್ಲಿ 6, 4 ರಲ್ಲಿ ಯಾವುದೇ ರನ್ ಬರಲಿಲ್ಲ 5 ಮತ್ತು 6 ನೇ ಎಸೆತದಲ್ಲಿ ಬ್ಯಾಟ್ಸ್ಮನ್ ಗಳು ವಿಕೆಟ್ ಒಪ್ಪಿಸುವ ಮೂಲಕ ಭಾರತ 2 ರನ್ ಗಳ ಜಯ ಗಳಿಸಿತು.
ಭಾರತದ ಬ್ಯಾಟಿಂಗ್ ವಿಭಾದಲ್ಲಿಯೂ ಅಕ್ಷರ್ ಪಟೇಲ್ ಮಿಂಚಿದರು, ದೀಪಕ್ ಹೂಡಾ ಸಹ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಬೌಲಿಂಗ್ ವಿಭಾಗದಲ್ಲಿ ಶಿವಂ ಮಾವಿ ಗಮನ ಸೆಳೆದರು ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾದ ಗೆಲುವಿನ ಓಟ ಮುಂದುವರಿಸಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


