ವೇಗದ ಬೌಲಿಂಗ್; ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲ್ಲಿಕ್, ಮುಂದಿನ ಗುರಿ ಶೊಯೆಬ್ ಅಖ್ತರ್!!
ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಟೀಂ ಇಂಡಿಯಾ ವೇಗಿ ಜಮ್ಮು ಎಕ್ಸ್ ಪ್ರೆಸ್ ಖ್ಯಾತಿಯ ಉಮ್ರಾನ್ ಮಲ್ಲಿಕ್ ತಮ್ಮ ವೇಗದ ಬೌಲಿಂಗ್ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಮುಂಬೈ: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಟೀಂ ಇಂಡಿಯಾ ವೇಗಿ ಜಮ್ಮು ಎಕ್ಸ್ ಪ್ರೆಸ್ ಖ್ಯಾತಿಯ ಉಮ್ರಾನ್ ಮಲ್ಲಿಕ್ ತಮ್ಮ ವೇಗದ ಬೌಲಿಂಗ್ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಹೌದು.. ಶ್ರೀಲಂಕಾ ವಿರುದ್ಧದ ಮೊದಲ ಟಿ–20 ಪಂದ್ಯದಲ್ಲಿ ಭಾರತದ ಯುವ ವೇಗಿ ಉಮ್ರಾನ್ ಮಲಿಕ್ ಅವರು ಅಪರೂಪದ ದಾಖಲೆ ನಿರ್ಮಿಸಿದ್ದು, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗದ ಬೌಲಿಂಗ್ ಮಾಡಿದ ಭಾರತದ ವೇಗಿ ಎನ್ನುವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಗಂಟೆಗೆ 155 ಕಿ.ಮಿ ವೇಗದಲ್ಲಿ ಬೌಲಿಂಗ್ ಮಾಡಿ ಈ ದಾಖಲೆ ನಿರ್ಮಿಸಿದ್ದು, ಈ ಮೂಲಕ ಈ ದಾಖಲೆಯನ್ನು ಹೊಂದಿದ್ದ ಭಾರತದ ಮತ್ತೋರ್ವ ವೇಗಿ ಜಸ್‌ಪ್ರೀತ್ ಬೂಮ್ರಾ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಈ ಹಿಂದೆ 2018ರ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಜಸ್‌ಪ್ರೀತ್ ಬೂಮ್ರಾ ಗಂಟೆಗೆ 153.2 ಕಿ.ಮಿ ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ಬರೆದಿದ್ದರು. ಇದೀಗ ಆ ದಾಖಲೆಯನ್ನು ಜಮ್ಮು ಎಕ್ಸ್ ಪ್ರೆಸ್ ಖ್ಯಾತಿ 23 ವರ್ಷದ ಯುವ ಬೌಲರ್ ಉಮ್ರಾನ್ ಮಲ್ಲಿಕ್ ಮುರಿದಿದ್ದಾರೆ.
ಜಾಗತಿಕ ಕ್ರಿಕೆಟ್ ನಲ್ಲಿ ವೇಗವಾಗಿ ಬೌಲಿಂಗ್ ಮಾಡಿದ ದಾಖಲೆ ಪಾಕಿಸ್ತಾನದ ವೇಗಿ ಶೋಯೆಬ್ ಮಲ್ಲಿಕ್ ಅವರ ಹೆಸರಲ್ಲಿದೆ. ಅಖ್ತರ್ 161 ಕಿ.ಮಿ ವೇಗದಲ್ಲಿ ಬೌಲಿಂಗ್ ಮಾಡಿ ಈ ದಾಖಲೆಯನ್ನು ನಿರ್ಮಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಭಾರತ ತಂಡ ಎರಡು ರನ್‌ಗಳ ವಿರೋಚಿತ ಜಯ ಸಾಧಿಸಿ, ಮೂರು ಪಂದ್ಯಗಳ ಸರಣಿಯಲ್ಲಿ 1–0 ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


