ಕ್ರಿಕೆಟ್

ಮುಂಬೈನಲ್ಲಿ ರಿಷಬ್ ಪಂತ್ ಗೆ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ

ಇತ್ತೀಚಿಗೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಗೆ ಶನಿವಾರ ಮುಂಬೈನಲ್ಲಿ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮುಂಬೈನಲ್ಲಿ ರಿಷಬ್ ಪಂತ್ ಗೆ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ
ರಿಷಬ್ ಪಂತ್
Published On :

ಮುಂಬೈ: ಇತ್ತೀಚಿಗೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಗೆ ಶನಿವಾರ ಮುಂಬೈನಲ್ಲಿ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 

ರಿಷಭ್ ಪಂತ್ ಅವರು ಶುಕ್ರವಾರದಂದು ಮೊಣಕಾಲಿನ ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.ಅವರು ಈಗ ವೈದ್ಯಕೀಯ ಚಿಕಿತ್ಸೆಯಲ್ಲಿದ್ದಾರೆ.ಮುಂದಿನ ಕ್ರಮ ಮತ್ತು ಪುನರ್ವಸತಿಯನ್ನು ಡಾ ದಿನ್ಶಾ ಪರ್ದಿವಾಲಾ ಮತ್ತು ಬಿಸಿಸಿಐ ಕ್ರೀಡಾ ವಿಜ್ಞಾನ ಮತ್ತು ಔಷಧ ತಂಡವು ವಹಿಸಲಿದೆ " ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಸ್ಪೋರ್ಟ್ಸ್ ಮೆಡಿಸಿನ್ ಕೇಂದ್ರದ ಮುಖ್ಯಸ್ಥ ಮತ್ತು ಆರ್ತ್ರೋಸ್ಕೊಪಿ ಮತ್ತು ಭುಜದ ಸೇವೆಯ ನಿರ್ದೇಶಕ ಡಾ ಪಾರ್ದಿವಾಲಾ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಿತು.

ಪಂತ್ ಅವರು ವಾಣಿಜ್ಯ ವಿಮಾನಯಾನದಿಂದ ಹಾರುವ ಸ್ಥಿತಿಯಲ್ಲಿಲ್ಲದ ಕಾರಣ ಡೆಹ್ರಾಡೂನ್‌ನಿಂದ ಏರ್ ಆಂಬ್ಯುಲೆನ್ಸ್ ಮೂಲಕ ಮುಂಬೈಗೆ ಕರೆದೊಯ್ಯಲಾಗಿತ್ತು. ಡಿಸೆಂಬರ್ 30 ರ ಮುಂಜಾನೆ ದೆಹಲಿಯಿಂದ ರೂರ್ಕಿಗೆ ಚಾಲನೆ ಮಾಡುತ್ತಿದ್ದ 25 ವರ್ಷದ ರಿಶಬ್ ಪಂತ್, ಈ ವೇಳೆ ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ನಂತರ ಅವರು ಗಂಭೀರವಾಗಿ ಗಾಯಗೊಂಡಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.