ಐಪಿಎಲ್ 2023: ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ!
ರಸ್ತೆ ಅಪಘಾತದಲ್ಲಿ ಗಾಯಗೊಂಡು ಐಪಿಎಲ್ ಟೂರ್ನಿಯಿಂದಲೇ ರಿಷಬ್ ಪಂತ್ ಹೊರಬಿದ್ದಿದ್ದು, ಆದರೂ ಬಿಸಿಸಿಐನಿಂದ 16 ಕೋಟಿ ರೂ ವೇತನ ಪಡೆಯಲಿದ್ದಾರೆ.

ಮುಂಬೈ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಐಪಿಎಲ್ ಟೂರ್ನಿಯಿಂದಲೇ ರಿಷಬ್ ಪಂತ್ ಹೊರಬಿದ್ದಿದ್ದು, ಆದರೂ ಬಿಸಿಸಿಐನಿಂದ 16 ಕೋಟಿ ರೂ ವೇತನ ಪಡೆಯಲಿದ್ದಾರೆ.
ಹೌದು... ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಚೇತರಿಕೆಗೆ ಸುಮಾರು 9 ತಿಂಗಳು ಸಮಯ ತೆಗೆದುಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಪಂತ್ ಈ ವರ್ಷ ನಡೆಯುವ ಎಲ್ಲ ಕ್ರಿಕೆಟ್ ಸರಣಿಯಿಂದ ದೂರ ಉಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈನ ಸದ್ಯ ಪಂತ್ ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದು, 16ನೇ ಆವೃತ್ತಿಯ ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ.
ಐಪಿಎಲ್ 2023ಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಂತ್ ಅವರನ್ನು 16 ಕೋ.ರೂ.ಗೆ ತಂಡದಲ್ಲೇ ಉಳಿಸಿಕೊಂಡಿತ್ತು. ಆದರೆ ಇದೀಗ ಪಂತ್ ಅವರು ಐಪಿಎಲ್ನಲ್ಲಿ ಆಡದಿದ್ದಲ್ಲಿ ಅವರಿಗೆ ಹಣ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಹಣವನ್ನು ಫ್ರಾಂಚೈಸಿ ಬದಲು ಬಿಸಿಸಿಐ ನೀಡುತ್ತದೆ ಎಂದು ವರದಿಯಾಗಿದೆ. ಪಂತ್ ಈ ವರ್ಷ ಐಪಿಎಲ್ನಲ್ಲಿ ಆಡದಿದ್ದರೂ, ಬಿಸಿಸಿಐ ಅವರ ಐಪಿಎಲ್ ಸಂಬಳದ 16 ಕೋಟಿ ರೂ.ಗಳನ್ನು ದಿಲ್ಲಿ ಕ್ಯಾಪಿಟಲ್ಸ್ ಪರವಾಗಿ ಸಂಪೂರ್ಣವಾಗಿ ಪಾವತಿಸುತ್ತದೆ. ಇದು ಮಾತ್ರವಲ್ಲದೆ, ಕೇಂದ್ರ ಒಪ್ಪಂದದಡಿಯಲ್ಲಿ ಅವರು ಪಡೆದ ವಾರ್ಷಿಕ ರಿಟೈನರ್ಶಿಪ್ ಶುಲ್ಕಕ್ಕೆ 5 ಕೋಟಿ ರೂ.ಗಳನ್ನು ನೀಡುತ್ತದೆ ಎಂದು ವರದಿಯಾಗಿದೆ.
ಬಿಸಿಸಿಐ, ಟೀಮ್ ಇಂಡಿಯಾದ ಎಲ್ಲ ಕೇಂದ್ರೀಯ ಗುತ್ತಿಗೆ ಆಟಗಾರರಿಗೆ ವಿಮೆ ಮಾಡಲಾಗುತ್ತದೆ. ಬಿಸಿಸಿಐ ನಿಯಮಗಳ ಪ್ರಕಾರ, ಈ ಆಟಗಾರರು ಗಾಯದ ಕಾರಣ ಐಪಿಎಲ್ನಿಂದ ಹೊರಗುಳಿದಿದ್ದಲ್ಲಿ ಮಂಡಳಿಯಿಂದ ಪೂರ್ಣವಾಗಿ ಅವರಿಗೆ ಮೊತ್ತವನ್ನು ಪಾವತಿಸಲಾಗುತ್ತದೆ. ಈ ಮೊತ್ತವನ್ನು ವಿಮಾ ಕಂಪನಿ ಪಾವತಿಸುತ್ತದೆ. ಆದ್ದರಿಂದ ಫ್ರಾಂಚೈಸಿ ಬದಲು ಆಟಗಾರರಿಗೆ ಬಿಸಿಸಿಐ ಹಣ ಪಾವತಿಸುತ್ತದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


