ಮೊದಲ ಏಕದಿನ ಪಂದ್ಯ: 22ನೇ ಬಾರಿಗೆ ಲಂಕಾ ವಿರುದ್ಧ 300+ ರನ್, ದಾಖಲೆ ಬರೆದ ಭಾರತ
ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 300ಕ್ಕೂ ಅಧಿಕ ರನ್ ಗಳಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಾಣ ಮಾಡಿದೆ.

ಗುವಾಹತಿ: ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 300ಕ್ಕೂ ಅಧಿಕ ರನ್ ಗಳಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಾಣ ಮಾಡಿದೆ.
ಗುವಾಹತಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 373 ರನ್ ಗಳಿಸಿದ್ದು, ಈ ಮೂಲಕ ಶ್ರೀಲಂಕಾ ವಿರುದ್ಧ ಅಪರೂಪದ ದಾಖಲೆ ನಿರ್ಮಾಣ ಮಾಡಿದೆ. ಏಕದಿನ ಕ್ರಿಕೆಟ್ ನಲ್ಲಿ ತಂಡವೊಂದರ ವಿರುದ್ಧ ಅತೀ ಹೆಚ್ಚು ಬಾರಿ 300ಕ್ಕೂ ಅಧಿಕ ರನ್ ಗಳಿಸಿದ ತಂಡಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನ ಗಳಿಸಿದೆ.
ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದು, ಆಸಿಸ್ ಪಡೆ ಭಾರತ ತಂಡದ ವಿರುದ್ಧ 28 ಬಾರಿ 300+ ರನ್ ಗಳಿಸಿದ್ದು ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಇಂದಿನ ಪಂದ್ಯದ ಮೂಲಕ ಪಟ್ಟಿಯಲ್ಲಿ ಭಾರತ 2ನೇ ಸ್ಥಾನಕ್ಕೇರಿದ್ದು, ಲಂಕಾ ವಿರುದ್ಧ ಈ ವರೆಗೂ 22 ಬಾರಿ 300+ ಅಧಿಕ ರನ್ ಗಳಿಸಿದೆ. ಪಟ್ಟಿಯಲ್ಲಿ 3 ಮತ್ತು 4ನೇ ಸ್ಥಾನದಲ್ಲೂ ಭಾರತ ತಂಡವೇ ಇದ್ದು ಆಸ್ಟ್ರೇಲಿಯಾ ವಿರುದ್ಧ 21 ಬಾರಿ 300ಕ್ಕೂ ಅಧಿಕ ರನ್ ಗಳಿಸಿದೆ. ಇನ್ನು ಇಂಗ್ಲೆಂಡ್ ವಿರುದ್ಧ 18 ಬಾರಿ 300ಕ್ಕೂ ಅಧಿಕ ರನ್ ಗಳಿಸಿದೆ.
STAT: Most 300+ ODI totals vs an oppponent
28 Aus vs Ind
22 Ind vs SL *
21 Ind vs Aus
18 Ind vs Eng
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


