ಕ್ರಿಕೆಟ್

2011 ವಿಶ್ವಕಪ್ ಫೈನಲ್ ನಲ್ಲಿ ಧೋನಿ ಬಗ್ಗೆ 'ಕೇಳಿರದ ಕಥೆ' ಹಂಚಿಕೊಂಡ ಗೌತಮ್ ಗಂಭೀರ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಾಜಿ ಟೀಂ ಇಂಡಿಯಾ ಕ್ಯಾಪ್ಟನ್ ಹೇಗೆ ತಮ್ಮನ್ನು ಪ್ರೋತ್ಸಾಹಿಸಿದ್ದರು ಎಂಬುದನ್ನು ಗೌತಮ್ ಗಂಭೀರ್ ಹಂಚಿಕೊಂಡಿದ್ದಾರೆ. ಅಂದಿನ ಪಂದ್ಯದಲ್ಲಿ ಗೌತಮ್ ಗಂಭೀರ್ 97 ರನ್ ಗಳಿಸಿದಾಗ ತಿಸಾರಾ ಪೆರೆರಾ ಬೌಲಿಂಗ್ ನಲ್ಲಿ ಬೌಲ್ಡ್ ಆಗಿದ್ದರು.

2011 ವಿಶ್ವಕಪ್ ಫೈನಲ್ ನಲ್ಲಿ ಧೋನಿ ಬಗ್ಗೆ 'ಕೇಳಿರದ ಕಥೆ' ಹಂಚಿಕೊಂಡ ಗೌತಮ್ ಗಂಭೀರ್
ಗೌತಮ್ ಗಂಭೀರ್, ಎಂಎಸ್ ಧೋನಿ
Published On :

ನವದೆಹಲಿ: ಸುಮಾರು 12 ವರ್ಷಗಳ ನಂತರ ಭಾರತ ತನ್ನ ನೆಲದಲ್ಲಿ ಏಕದಿನ ಅಂತಾರಾಷ್ಟ್ರೀಯ ವಿಶ್ವಕಪ್ ಅತಿಥ್ಯ ವಹಿಸಿಕೊಳ್ಳುತ್ತಿದೆ. 2011ರಲ್ಲಿ ತವರು ನೆಲದಲ್ಲಿ ನಡೆದ ವಿಶ್ವಕಪ್ ನಲ್ಲಿ ಶ್ರೀಲಂಕಾ ವಿರುದ್ಧ ಗೆದ್ದು ಎರಡನೇ ಬಾರಿಗೆ ಭಾರತ ಟ್ರೋಫಿ ಮುಡಿಗೇರಿಸಿಕೊಂಡಿತ್ತು.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಾಜಿ ಟೀಂ ಇಂಡಿಯಾ ಕ್ಯಾಪ್ಟನ್ ಹೇಗೆ ತಮ್ಮನ್ನು ಪ್ರೋತ್ಸಾಹಿಸಿದ್ದರು ಎಂಬುದನ್ನು ಗೌತಮ್ ಗಂಭೀರ್ ಹಂಚಿಕೊಂಡಿದ್ದಾರೆ. ಅಂದಿನ ಪಂದ್ಯದಲ್ಲಿ ಗೌತಮ್ ಗಂಭೀರ್ 97 ರನ್ ಗಳಿಸಿದಾಗ ತಿಸಾರಾ ಪೆರೆರಾ ಬೌಲಿಂಗ್ ನಲ್ಲಿ ಬೌಲ್ಡ್ ಆಗಿದ್ದರು. 

ಈ ಕುರಿತಂತೆ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಗೆಲುವಿನ ಬಳಿಕ ಸ್ಟಾರ್ ಸ್ಫೋರ್ಟ್ ನಲ್ಲಿ ಮಾತನಾಡಿದ ಗಂಭೀರ್, ಎಂಎಸ್ ಧೋನಿ ಅತ್ಯಂತ ಪ್ರೋತ್ಸಾಹದಾಯಕರು. ನಾನು ಶತಕ ಗಳಿಸಲು ಅವರು ಯಾವಾಗಲೂ ಪ್ರೋತ್ಸಾಹಿಸುತ್ತಿದ್ದರು. ಶತಕ ಗಳಿಸಲು ಟೈಮ್ ತೆಗೆದುಕೊಳ್ಳುವಂತೆ, ಒತ್ತಡ ಹಾಕಿಕೊಳ್ಳದಂತೆ ಓವರ್ ಗಳ ನಡುವೆ ಹೇಳುತ್ತಿದ್ದರು ಎಂದು ನೆನಪಿಸಿಕೊಂಡರು. 

ಫೈನಲ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ ಭಾರತಕ್ಕೆ 275 ರನ್ ಗಳ ಗುರಿ ನೀಡಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ವೀರೇಂದ್ರ ಸೆಹ್ವಾಗ್ ಶೂನ್ಯಕ್ಕೆ ಔಟಾದರೆ ಸಚಿನ್ ತೆಂಡೊಲ್ಕರ್ 18 ರನ್ ಗಳಿಗೆ ಲಸಿತ್ ಮಲಿಂಗಾ ಬೌಲಿಂಗ್ ನಲ್ಲಿ ಔಟ್ ಆಗಿದ್ದರು. ಆದಾಗ್ಯೂ, ಮೂರನೇ ವಿಕೆಟ್ ಗೆ ಜೊತೆಯಾದ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ 83 ರನ್ ಗಳಿಸುವ ಮೂಲಕ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡಿದ್ದರು.

ನಾಲ್ಕನೇ ವಿಕೆಟ್ ಗೆ ಜೊತೆಯಾದ ಗಂಭೀರ್ ಮತ್ತು ಧೋನಿ 109 ರನ್  ಕಲೆಹಾಕಿದ್ದರು. ಗಂಭೀರ್ 97 ರನ್ ಗಳಿಸಿ ಔಟ್ ಆಗುವ ಮೂಲಕ ಶತಕದಿಂದ ವಂಚಿತರಾಗಿದ್ದರು. ಕೊನೆಗೆ ಧೋನಿ ಹಾಗೂ ಯುವರಾಜ್ ಸಿಂಗ್ ಔಟಾಗದೆ 2011ರ ವಿಶ್ವಕಪ್ ನ್ನು ಟೀಂ ಇಂಡಿಯಾ ಮುಡಿಗೇರಿಸಿಕೊಳ್ಳುವಲ್ಲಿ ಪ್ರಮುಖವಾದ ಪಾತ್ರ ನಿರ್ವಹಿಸಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.