ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ, ಸರಣಿ ಸಮಬಲ
ಭಾರತ-ನ್ಯೂಜಿಲ್ಯಾಂಡ್ ನಡುವಿನ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ರೋಚಕ ಜಯ ದಾಖಲಿಸಿ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ.

ಲಖನೌ: ಭಾರತ-ನ್ಯೂಜಿಲ್ಯಾಂಡ್ ನಡುವಿನ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ರೋಚಕ ಜಯ ದಾಖಲಿಸಿ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ.
ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿ ಅಲ್ಪ ಮೊತ್ತದ ಟಾರ್ಗೆಟ್ ನೀಡಿತ್ತು. ಗುರಿ ಬೆನ್ನಟ್ಟಿದ ಭಾರತ ಇನ್ನೂ ಒಂದು ಎಸೆತ ಇರುವಂತೆಯೇ ನ್ಯೂಜಿಲೆಂಡ್ ವಿರುದ್ಧ ತಿಣುಕಾಡಿ ರೋಚಕ 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಮೂರು T20 ಪಂದ್ಯಗಳ ಸರಣಿ ಭಾರತ 1-1 ಅಂತದಿಂದ ಸಮಬಲ ಸಾಧಿಸಿದೆ.
ರೋಚಕ ಪಂದ್ಯದಲ್ಲಿ 18 ಎಸೆತಗಳಲ್ಲಿ ಭಾರತಕ್ಕೆ 18 ರನ್ ಗಳ ಅಗತ್ಯವಿತ್ತು. 18ನೇ ಓವರ್‌ನಲ್ಲಿ ಭಾರತ 5 ರನ್ ಗಳಿಸಿದರೆ, ಕೊನೆಯ ಓವರ್‌ನಲ್ಲಿ 6 ರನ್ ಅಗತ್ಯವಿತ್ತು.
ಕೊನೆಯ ಓವರ್ ನ ಮೂರನೇ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ಕ್ಯಾಚ್ ಇತ್ತು ಔಟ್ ಆಗುವ ಸಾಧ್ಯತೆ ಇತ್ತು. ಆದರೆ ಕ್ಯಾಚ್ ಹಿಡಿಯುವಲ್ಲಿ ಟಿಕ್ನರ್ ವಿಫಲರಾದರು. ಒಂದು ಎಸೆತ ಬಾಕಿ ಇರುವಾಗ, ಸೂರ್ಯಕುಮಾರ್ ಬೌಂಡರಿ ದಾಖಲಿಸಿ ತಂಡ ಜಯಗಳಿಸಲು ಕಾರಣರಾದರು.
ಈ ಪಂದ್ಯದಲ್ಲಿ ಭಾರತದ ಪರ ಒಂದೂ ಸಿಕ್ಸ್ ದಾಖಲಾಗದೇ ಇರುವುದು ವಿಶೇಷವೆನಿಸಿದೆ. ಅರ್ಶ್‌ದೀಪ್ ಸಿಂಗ್ 2 ವಿಕೆಟ್ ಪಡೆದರೆ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ದೀಪಕ್ ಹೂಡಾ, ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


