ಕ್ರಿಕೆಟ್

ಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಇನ್ನಿಂಗ್ಸ್ ಮತ್ತು 141 ರನ್ ಭರ್ಜರಿ ಜಯ

ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿಯಾಗಿ ಜಯಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಇನ್ನಿಂಗ್ಸ್ ಮತ್ತು 141 ರನ್ ಭರ್ಜರಿ ಜಯ
ಟೀಂ ಇಂಡಿಯಾಗೆ ಜಯ
Published On :

ಡೊಮೆನಿಕಾ: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿಯಾಗಿ ಜಯಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 271 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ ತಂಡ 2ನೇ ಇನ್ನಿಂಗ್ಸ್ ನಲ್ಲೂ ಆರ್ ಅಶ್ವಿನ್ ಸ್ಪಿನ್ ದಾಳಿಗೆ ತತ್ತರಿಸಿ ಕೇವಲ 130 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ  ಇನ್ನಿಂಗ್ಸ್ ಮತ್ತು 141 ರನ್ ಗಳ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಎರಡು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಭಾರತ ತಂಡ 1–0 ಅಂತರದ ಮುನ್ನಡೆ ಸಾಧಿಸಿದೆ.

ಪದಾರ್ಪಣೆ ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ (171), ನಾಯಕ ರೋಹಿತ್ ಶರ್ಮಾ (103) ಶತಕ ಹಾಗೂ ಅನುಭವಿ ವಿರಾಟ್‌ ಕೊಹ್ಲಿ 76 ರನ್‌ ಕಲೆಹಾಕಿ ಟೀಂ ಇಂಡಿಯಾ ಇನಿಂಗ್ಸ್‌ಗೆ ಬಲ ತುಂಬಿದ್ದರು.

ಆರ್‌.ಅಶ್ವಿನ್‌ ಕೈಚಳಕ
270 ರನ್ ಹಿನ್ನಡೆಯೊಂದಿಗೆ ಕಣಕ್ಕಿಳಿದ ವಿಂಡೀಸ್ ತಂಡದ ಬ್ಯಾಟಿಂಗ್‌, ಆರ್‌.ಅಶ್ವಿನ್‌ ಕೈಚಳಕದ ಎದುರು ಎರಡನೇ ಇನಿಂಗ್ಸ್‌ನಲ್ಲೂ ಸುಧಾರಿಸಲಿಲ್ಲ. ಸ್ಪಿನ್‌ ಬಲೆಗೆ ಬಿದ್ದ ಆತಿಥೇಯ ತಂಡದ ಬ್ಯಾಟರ್‌ಗಳು ರನ್‌ ಗಳಿಸಲು ಪರದಾಡಿದರು. ಅಲಿಕ್ ಅತಾಂಜೆ 27 ರನ್‌ ಗಳಿಸಿದ್ದೇ, ಈ ತಂಡದ ಪರ ವೈಯಕ್ತಿಕ ಗರಿಷ್ಠ ಮೊತ್ತ ಎನಿಸಿತು. ಹೀಗಾಗಿ, ವಿಂಡೀಸ್‌ ಬಳಗ 130 ರನ್ ಗಳಿಗೆ ಸರ್ವ ಪತನ ಕಂಡು, ಹೀನಾಯ ಸೋಲೊಪ್ಪಿಕೊಳ್ಳಬೇಕಾಯಿತು.

ಭಾರತ ಪರ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದಿದ್ದ ಅಶ್ವಿನ್, ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್‌ ಕಬಳಿಸಿದರು. ಯಶಸ್ವಿ ಜೈಸ್ವಾಲ್ ಪಂದ್ಯಶ್ರೇಷ್ಠ ಎನಿಸಿಕೊಂಡರು.

ಎರಡನೇ ಪಂದ್ಯ ಟ್ರಿನಿಡಾಡ್‌ನ ಕ್ವೀನ್ಸ್‌ ಪಾರ್ಕ್‌ನಲ್ಲಿ ಜುಲೈ 20ರಿಂದ ಜುಲೈ 24ರ ವರೆಗೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.