ಕ್ರಿಕೆಟ್

ಮಹಾಕಾಳೇಶ್ವರ ದೇವಾಲಯದಲ್ಲಿ ವಿರಾಟ್, ಅನುಷ್ಕಾ ಶರ್ಮಾ ವಿಶೇಷ ಪೂಜೆ!

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಬಾಬಾ ಮಹಾಕಾಳೇಶ್ವರ ದೇವಾಲಯಕ್ಕೆ ಶನಿವಾರ ಭೇಟಿ ನೀಡಿದ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ವಿಶೇಷ ಪೂಜೆ ಸಲ್ಲಿಸಿದರು.

ಮಹಾಕಾಳೇಶ್ವರ ದೇವಾಲಯದಲ್ಲಿ ವಿರಾಟ್, ಅನುಷ್ಕಾ ಶರ್ಮಾ ವಿಶೇಷ ಪೂಜೆ!
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
Published On :

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಬಾಬಾ ಮಹಾಕಾಳೇಶ್ವರ ದೇವಾಲಯಕ್ಕೆ ಶನಿವಾರ ಭೇಟಿ ನೀಡಿದ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಡೆದ ಭಸ್ಮ ಆರತಿಯಲ್ಲಿ ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ಭಾಗವಹಿಸಿದರು.  ಭಸ್ಮ ಆರತಿ ಇಲ್ಲಿನ ಪ್ರಸಿದ್ಧ ಆಚರಣೆಯಾಗಿದ್ದು,  ಬೆಳಿಗ್ಗೆ 4 ರಿಂದ 5:30 ರ ನಡುವೆ ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ.

ಬಳಿಕ ದಂಪತಿಗಳು ದೇವಸ್ಥಾನದ ಗರ್ಭಗುಡಿಗೆ ಆಗಮಿಸಿ ಜಲಾಭಿಷೇಕ ನೆರವೇರಿಸಿದರು. ಪೂಜೆ ಹಿನ್ನೆಲೆಯಲ್ಲಿ ವಿರಾಟ್ ಧೋತಿ ಧರಿಸಿದ್ದರೆ, ಅನುಷ್ಕಾ ಶರ್ಮಾ ಸಾಂಪ್ರದಾಯಿಕ ತೆಳುವಾದ ಸೀರೆ ಧರಿಸಿದ್ದನ್ನು ನೋಡಬಹುದು. ವಿರಾಟ್ ಕೂಡ ಪ್ರಾರ್ಥಿಸುತ್ತಿರುವುದು ಕಂಡುಬಂತು. ಪೂಜೆ ನಂತರ ದಂಪತಿ  ದೇವಸ್ಥಾನದ ಆವರಣದಲ್ಲಿ ಕೆಲಕಾಲ ಕಳೆದರು.

ಈ ಹಿಂದೆ ವಿರಾಟ್ ಮತ್ತು ಅನುಷ್ಕಾ ರಿಷಿಕೇಶಕ್ಕೆ ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದರು. ಸ್ವಾಮಿ ದಯಾನಂದ ಗಿರಿ ಆಶ್ರಮಕ್ಕೆ ಭೇಟಿ ನೀಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ತಾರಾ ಜೋಡಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿರುವುದು ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.