WPL 2023: ಮುಂಬೈ ಇಂಡಿಯನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿದ ಯುಪಿ ವಾರಿಯರ್ಸ್!
ಮಹಿಳೆಯರ ಪ್ರೀಮಿಯರ್ ಲೀಗ್‌ನ 15ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಯುಪಿ ವಾರಿಯರ್ಸ್ 5 ವಿಕೆಟ್‌ಗಳಿಂದ ಸೋಲಿಸಿದೆ. ಮುಂಬೈ ತಂಡ ಯುಪಿ ವಾರಿಯರ್ಸ್ ಗೆ 128 ರನ್ ಟಾರ್ಗೆಟ್ ನೀಡಿತ್ತು.

ಮಹಿಳೆಯರ ಪ್ರೀಮಿಯರ್ ಲೀಗ್‌ನ 15ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಯುಪಿ ವಾರಿಯರ್ಸ್ 5 ವಿಕೆಟ್‌ಗಳಿಂದ ಸೋಲಿಸಿದೆ. ಮುಂಬೈ ತಂಡ ಯುಪಿ ವಾರಿಯರ್ಸ್ ಗೆ 128 ರನ್ ಟಾರ್ಗೆಟ್ ನೀಡಿತ್ತು.
ಯುಪಿಯಿಂದ ತಹ್ಲಿಯಾ ಮೆಕ್‌ಗ್ರಾತ್ (38) ಮತ್ತು ಗ್ರೇಸ್ ಹ್ಯಾರಿಸ್ (39) ಅದ್ಭುತ ಬ್ಯಾಟಿಂಗ್ ನೆರವಿನಿಂದ ಯುಪಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಆದರೆ ಇದಾದ ನಂತರವೂ ಯುಪಿ ಗೆಲುವಿಗೆ ಕೊನೆಯ ಓವರ್‌ನಲ್ಲಿ 5 ರನ್‌ಗಳ ಅಗತ್ಯವಿತ್ತು. ಆಗ ದೀಪ್ತಿ ಶರ್ಮಾ ಮತ್ತು ಸೋಫಿ ಎಕ್ಲೆಸ್ಟೋನ್ ಕ್ರೀಸ್‌ನಲ್ಲಿದ್ದರು.
ಇಂತಹ ಪರಿಸ್ಥಿತಿಯಲ್ಲಿ ಬ್ಯಾಟರ್ ಎಕ್ಲೆಸ್ಟೋನ್ ಕೊನೆಯ ಓವರ್ ನ ಮೂರನೇ ಎಸೆತವನ್ನು ಸಿಕ್ಸರ್ ಬಾರಿಸಿ ಯುಪಿಗೆ 5 ವಿಕೆಟ್ ಗಳ ಜಯ ತಂದುಕೊಟ್ಟರು. ಸೋಫಿ ಎಕ್ಲೆಸ್ಟೋನ್ 17 ಎಸೆತಗಳಲ್ಲಿ 16 ರನ್ ಗಳಿಸಿ ಅಜೇಯರಾಗಿ ಉಳಿದರು, ದೀಪ್ತಿ ಶರ್ಮಾ 14 ಎಸೆತಗಳಲ್ಲಿ 13 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು. ಮುಂಬೈ ಪರ ಅಮೆಲಿಯಾ ಕೆರ್ ಯಶಸ್ವಿ ಬೌಲರ್ ಆಗಿದ್ದು, 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಈ ಗೆಲುವಿನೊಂದಿಗೆ ಯುಪಿ ಪ್ಲೇಆಫ್ ರೇಸ್‌ನಲ್ಲಿ ತನ್ನನ್ನು ತಾನು ಉಳಿಸಿಕೊಂಡಿದೆ.
ಇದಕ್ಕೂ ಮುನ್ನ ಮುಂಬೈ ವಿರುದ್ಧ ಟಾಸ್ ಗೆದ್ದ ಯುಪಿ ವಾರಿಯರ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮುಂಬೈ ಮೊದಲು ಆಡಿದ 20 ಓವರ್‌ಗಳಲ್ಲಿ 127/10 ರನ್ ಗಳಿಸಿತು. ಮುಂಬೈ ಪರ ಹೇಲಿ ಮ್ಯಾಥ್ಯೂಸ್ 35 ರನ್, ಇಸ್ಸಿ ವಾಂಗ್ 32 ರನ್ ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ 22 ಎಸೆತಗಳಲ್ಲಿ 25 ರನ್ ಗಳಿಸಿದರೆ, ಯುಪಿ ಪರ ರಾಜೇಶ್ವರಿ ಗಾಯಕ್ವಾಡ್ 2 ವಿಕೆಟ್, ಸೋಫಿ ಎಕ್ಲೆಸ್ಟೋನ್ 3 ವಿಕೆಟ್ ಪಡೆದರು, ದೀಪ್ತಿ ಶರ್ಮಾ 2 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


