2ನೇ ಏಕದಿನ ಪಂದ್ಯ: ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ವಿರುದ್ಧ ಗೆದ್ದ ಆಸ್ಟ್ರೇಲಿಯಾ!
ವಿಶಾಖಪಟ್ಟಣಂ: ಮೂರು ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಟೀಂ ಇಂಡಿಯಾವನ್ನು ಮಣಿಸಿದೆ.

ವಿಶಾಖಪಟ್ಟಣಂ: ಮೂರು ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಟೀಂ ಇಂಡಿಯಾವನ್ನು ಮಣಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 26 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ತಂಡ 11 ಓವರ್‌ಗಳಲ್ಲಿ 121 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಬೀಗಿದೆ. ವಿಶಾಖಪಟ್ಟಣಂನಲ್ಲಿ ಈ ಗೆಲುವಿನೊಂದಿಗೆ ಕಾಂಗರೂ ತಂಡ ಸರಣಿಗೆ ಮರಳಿದೆ. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮುಂಬೈನಲ್ಲಿ ಸೋತಿತ್ತು. ಇದೀಗ ಸರಣಿ 1-1ರಲ್ಲಿ ಸಮಬಲ ಸಾಧಿಸಿದೆ. ಮೂರನೇ ಮತ್ತು ಕೊನೆಯ ಪಂದ್ಯ ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿದೆ.
ಮಿಚೆಲ್ ಮಾರ್ಷ್ ಮತ್ತು ಟ್ರಾವಿಸ್ ಹೆಡ್ ಅವರ ಅರ್ಧಶತಕಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು ಎರಡನೇ ಏಕದಿನ ಪಂದ್ಯದಲ್ಲಿ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಕಾಂಗರೂ ತಂಡ ಸರಣಿಯಲ್ಲಿ ಪುನರಾಗಮನ ಮಾಡಿದೆ.
ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ್ದು ಟೀಂ ಇಂಡಿಯಾ ಪವರ್‌ಪ್ಲೇ (ಆರಂಭಿಕ 10 ಓವರ್‌ಗಳು) ನಲ್ಲಿ ಭಾರತದ ಅರ್ಧದಷ್ಟು ತಂಡದವರು ಪೆವಿಲಿಯನ್‌ಗೆ ಮರಳಿದರು. ರೋಹಿತ್ ಶರ್ಮಾ ಅಥವಾ ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್ ಮಾಡಿಲ್ಲ. ಶುಭಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. 11 ಬ್ಯಾಟ್ಸ್‌ಮನ್‌ಗಳಲ್ಲಿ ನಾಲ್ವರು ಮಾತ್ರ ಎರಡಂಕಿ ದಾಟುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ವಿರಾಟ್ ಕೊಹ್ಲಿ ಗರಿಷ್ಠ 31 ರನ್ ಗಳಿಸಿದರು. ಅದೇ ಸಮಯದಲ್ಲಿ ಅಕ್ಷರ್ ಪಟೇಲ್ ಅಜೇಯ 29 ರನ್ ಗಳಿಸಿ ತಂಡವನ್ನು 100ರ ಗಡಿ ದಾಟಿಸಿದರು. ರವೀಂದ್ರ ಜಡೇಜಾ 16 ಮತ್ತು ರೋಹಿತ್ ಶರ್ಮಾ 13 ರನ್ ಗಳಿಸಿದರು. ಕೆಎಲ್ ರಾಹುಲ್ ಒಂಬತ್ತು ಮತ್ತು ಹಾರ್ದಿಕ್ ಪಾಂಡ್ಯ ಕೇವಲ ಒಂದು ರನ್ ಗಳಿಸಲಷ್ಟೇ ಶಕ್ತರಾದರು. ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಐದು ಮತ್ತು ಸೀನ್ ಅಬಾಟ್ ಮೂರು ವಿಕೆಟ್ ಪಡೆದರು. ನಾಥನ್ ಎಲ್ಲಿಸ್ ಎರಡು ವಿಕೆಟ್ ಪಡೆದರು.
117 ರನ್ ಬೆನ್ನಟ್ಟಿದ ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ 36 ಎಸೆತಗಳಲ್ಲಿ 66 ಮತ್ತು ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 51 ರನ್ ಗಳಿಸಿ ಅಜೇಯರಾಗಿ ಉಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


