ಐಪಿಎಲ್ 2023: ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 5 ರನ್ ಗಳ ರೋಚಕ ಗೆಲುವು!
ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 44ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 5 ರನ್ ಗಳಿಂದ ರೋಚಕ ಗೆಲುವು ಸಾಧಿಸಿದೆ.

ಅಹಮದಾಬಾದ್: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 44ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 5 ರನ್ ಗಳಿಂದ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಶೂನ್ಯಕ್ಕೆ ಔಟಾದರೆ, ಡೇವಿಡ್ ವಾರ್ನರ್ ಕೇವಲ 2 ರನ್ ಗಳಿಗೆ ರನ್ ಔಟ್ ಆಗುವ ಮೂಲಕ ತಂಡ ಆರಂಭಿಕ ಆಘಾತ ಅನುಭವಿಸಿತು. ಯಾಮ್ ಗಾರ್ಗ್ 10, ರಿಲೆ ರೊಸೋ 8, ಮನೀಶ್ ಪಾಂಡೆ 1 ರನ್ ಗಳಿಗೆ ಫೆವಿಲಿಯನ್ ಗೆ ನಿರ್ಗಮಿಸಿದರು.
ನಂತರ ಜೊತೆಯಾದ ಅಕ್ಸರ್ ಪಟೇಲ್ 27, ಅಮನ್ ಹಕ್ಕಿಂ ಖಾನ್ ಭರ್ಜರಿ 51 ಹಾಗೂ ರಿಪಲ್ ಪಟೇಲ್ 23 ರನ್ ಗಳಿಸುವ ಮೂಲಕ ತಂಡ 130 ರನ್ ಗಳಿಸಲು ಪ್ರಮುಖ ಕೊಡುಗೆ ನೀಡಿದರು. ಗುಜರಾತ್ ಟೈಟನ್ಸ್ ಪರ ಮೊಹಮ್ಮದ್ ಶಮಿ 4 ವಿಕೆಟ್ ಕಬಳಿಸಿದರೆ, ಮೊಹಿತ್ ಶರ್ಮಾ 2, ರಶೀದ್ ಖಾನ್ 1 ವಿಕೆಟ್ ಪಡೆದರು.
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 131 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಗುಜರಾತ್ ಟೈಟನ್ಸ್ ಪರ ನಾಯಕ ಹಾರ್ದಿಕ್ ಪಾಂಡ್ಯ ಭರ್ಜರಿ 59 ರನ್ ಗಳಿಸಿದರೆ, ಅಭಿನವ್ ಮನೋಹರ್ 26, ರಾಹುಲ್ ತೇವಾಟಿಯಾ 20 ರನ್ ಗಳಿಸಿದರು. ಉಳಿದ ಯಾವುದೇ ಆಟಗಾರರು ಎರಡಂಕಿ ದಾಟುವಲ್ಲಿ ವಿಫಲವಾದರು. ಇದರಿಂದಾಗಿ 6 ವಿಕೆಟ್ ನಷ್ಟಕ್ಕೆ 125 ರನ್ ಗಳಿಸುವ ಮೂಲಕ ಗುಜರಾತ್ ಟೈಟನ್ಸ್ ತವರಿನಲ್ಲಿಯೇ ಸೋಲಿಗೆ ಶರಣಾಯಿತು.
ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್ ಹಾಗೂ ಇಶಾಂತ್ ಶರ್ಮಾ ತಲಾ 2 ವಿಕೆಟ್ ಪಡೆದರೆ, ನಾರ್ಟೋಜ್, ಕುಲದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು. ಗುಜರಾತ್ ಟೈಟನ್ಸ್ ಪರ 4 ವಿಕೆಟ್ ಪಡೆದ ಮೊಹಮ್ಮದ್ ಶಮಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


