ಐಪಿಎಲ್ 2023: ರಾಜಸ್ಥಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆ 9 ವಿಕೆಟ್ ಗಳ ಭರ್ಜರಿ ಗೆಲುವು
ರಾಜಸ್ಥಾನ ರಾಯಲ್ಸ್ ಗೆ ತವರಿನಲ್ಲೇ ಮುಖಭಂಗವಾಗಿದೆ. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.

ಜೈಪುರ: ರಾಜಸ್ಥಾನ ರಾಯಲ್ಸ್ ಗೆ ತವರಿನಲ್ಲೇ ಮುಖಭಂಗವಾಗಿದೆ. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ 17.5 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 118 ರನ್ ಗಳಿಸಲಷ್ಟೇ ಶಕ್ತವಾಯಿತು. ರಾಜಸ್ಥಾನ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 14 ರನ್ ಗಳಿಗೆ ರನೌಟ್ ಆದರು. ನಂತರ ಜೊಸ್ ಬಟ್ಲರ್ 8, ನಾಯಕ ಸಂಜು ಸ್ಯಾಮ್ಸನ್ 30, ದೇವದತ್ತ ಪಡಿಕ್ಕಲ್ 12,ಟ್ರೆಂಟ್ ಬೊಲ್ಟ್ 15 ರನ್ ಗಳಿಸಿದರು. ಇವರನ್ನು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ಎರಡಂಕಿ ದಾಟುವಲ್ಲಿ ವಿಫಲರಾದರು.
ಗುಜರಾತ್ ಟೈಟನ್ಸ್ ಪರ ರಶೀದ್ ಖಾನ್ 3 ವಿಕೆಟ್ ಪಡೆದರೆ, ನೂರ್ ಅಹ್ಮದ್ 2, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ಜೊಸ್ ಲಿಟ್ಲ್ ತಲಾ 1 ವಿಕೆಟ್ ಪಡೆದರು. ರಾಜಸ್ಥಾನ ರಾಯಲ್ಸ್ ನೀಡಿದ 119 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಗುಜರಾತ್ ಟೈಟನ್ಸ್ 1 ವಿಕೆಟ್ ನಷ್ಟಕ್ಕೆ ಗೆಲುವಿನ ನಗೆ ಬೀರಿತು.
ರಾಜಸ್ಥಾನ ರಾಯಲ್ಸ್ ಪರ ವೃದ್ಧಿಮನ್ ಶಾ ಅಜೇಯ 41, ಶುಭ್ ಮನ್ ಗಿಲ್ 36, ಹಾರ್ದಿಕ್ ಪಾಂಡ್ಯ ಅಜೇಯ 39 ರನ್ ಗಳಿಸಿದರು. ಗುಜರಾತ್ ಟೈಟನ್ಸ್ ಪರ ಮೂರು ವಿಕೆಟ್ ಪಡೆದ ರಶೀದ್ ಖಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


