ಐಪಿಎಲ್ 2023: ಗುಜರಾತ್ ವಿರುದ್ಧದ ಪಂದ್ಯ, ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ
ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.

ಜೈಪುರ: ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.
ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್, ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಸದ್ಯ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ 9 ಪಂದ್ಯಗಳನ್ನಾಡಿದ್ದು, 12 ಪಾಯಿಂಟ್ ಗಳೊಂದಿಗೆ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ 10 ಪಾಯಿಂಟ್ ಗಳೊಂದಿಗೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ರಾಜಸ್ಥಾನ ತಂಡ ಇಂತಿದೆ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ಆರ್. ಅಶ್ವಿನ್, ಟ್ರೆಂಟ್ ಬೌಲ್ಟ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್.
ಗುಜರಾತ್ ಟೈಟಾನ್ಸ್ ತಂಡ ಇಂತಿದೆ: ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


