IPL 2023: ಡೆಲ್ಲಿ ಕ್ಯಾಪಿಟಲ್ಸ್ ಅನ್ನು 27 ರನ್‌ಗಳಿಂದ ಸೋಲಿಸಿದ ಚೆನ್ನೈ; ಪ್ಲೇಆಫ್ ಸನಿಹಕ್ಕೆ ಧೋನಿ ಪಡೆ!
ಐಪಿಎಲ್ 2023ರ 55ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 27 ರನ್‌ಗಳಿಂದ ಮಣಿಸಿದೆ.

ಚೆನ್ನೈ: ಐಪಿಎಲ್ 2023ರ 55ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 27 ರನ್‌ಗಳಿಂದ ಮಣಿಸಿದೆ.
ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 140 ರನ್ ಗಳಿಸಲಷ್ಟೇ ಶಕ್ತವಾಯಿತು.
ಚೆನ್ನೈ ಪರ ಶಿವಂ ದುಬೆ ಗರಿಷ್ಠ 25 ರನ್ ಗಳಿಸಿದರು. ಮಿಚೆಲ್ ಮಾರ್ಷ್ ಮೂರು ವಿಕೆಟ್ ಪಡೆದರು. 19ನೇ ಓವರ್‌ನಲ್ಲಿ ಖಲೀಲ್ ಅಹ್ಮದ್ ಎರಡು ಸಿಕ್ಸರ್‌ಗಳನ್ನು ಸಿಡಿಸಿದ ಧೋನಿ ಚೆನ್ನೈ ಗೌರವಾನ್ವಿತ ಸ್ಕೋರ್‌ಗೆ ಕೊಂಡೊಯ್ದರು. ಇದಕ್ಕೂ ಮುನ್ನ ಡೆಲ್ಲಿ ಬೌಲರ್‌ಗಳು ಚೆನ್ನೈ ಬ್ಯಾಟ್ಸ್‌ಮನ್‌ಗಳನ್ನು ಒತ್ತಡಕ್ಕೆ ಸಿಲುಕಿಸಿದ್ದರು. ಯಾವುದೇ ಬ್ಯಾಟ್ಸ್‌ಮನ್‌ಗಳು ಉತ್ತಮ ಆರಂಭವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಶಿವಂ ದುಬೆ ಗರಿಷ್ಠ 25 ರನ್ ಗಳಿಸಿದರು. ರಿತುರಾಜ್ ಗಾಯಕ್ವಾಡ್ 24, ಅಂಬಟಿ ರಾಯುಡು 23 ಮತ್ತು ಅಜಿಂಕ್ಯ ರಹಾನೆ 21 ರನ್ ಕೊಡುಗೆ ನೀಡಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ಡೆವೊನ್ ಕಾನ್ವೆ ಮತ್ತು ರಿತುರಾಜ್ ಗಾಯಕ್ವಾಡ್ ಮೊದಲ ವಿಕೆಟ್‌ಗೆ 32 ರನ್ ಜೊತೆಯಾಟ ನೀಡಿದರು. ಕಾನ್ವೇ 13 ಎಸೆತಗಳಲ್ಲಿ 10 ರನ್ ಗಳಿಸಿ ಔಟಾದರು. ಇದಾದ ಬಳಿಕ ಗಾಯಕ್ವಾಡ್ ಕೂಡ ಪವರ್‌ಪ್ಲೇ ಬಳಿಕ ಮುಂದಿನ ಓವರ್‌ನಲ್ಲಿ ಪೆವಿಲಿಯನ್‌ಗೆ ಮರಳಿದರು. ರಿತುರಾಜ್ 18 ಎಸೆತಗಳಲ್ಲಿ 24 ರನ್ ಗಳಿಸಿದರು.
ಅಕ್ಷರ್ ಪಟೇಲ್ ಎರಡೂ ವಿಕೆಟ್ ಪಡೆದರು. ಮೊಯಿನ್ ಅಲಿ 12 ಎಸೆತಗಳಲ್ಲಿ 7 ರನ್ ಗಳಿಸಿ ಔಟಾದರು. ಅಜಿಂಕ್ಯ ರಹಾನೆ 20 ಎಸೆತಗಳಲ್ಲಿ 21 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಶಿವಂ ದುಬೆ 12 ಎಸೆತಗಳಲ್ಲಿ 25 ರನ್ ಗಳಿಸಿದರು. ಅಂಬಟಿ 23 ರನ್ ಕೊಡುಗೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


