ಕ್ರಿಕೆಟ್

IPL 2023: ಕೆಕೆಆರ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 9 ವಿಕೆಟ್ ಗೆಲುವು

ಇಂಡಿಯನ್ ಪ್ರೀಮಿಯರ್ ಲೀಗ್ 2023(IPL)ರ 56ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ತಂಡ 9 ವಿಕೆಟ್ ಗಳಿಂದ ಗೆಲುವು ಸಾಧಿಸಿದ್ದಾರೆ.

IPL 2023: ಕೆಕೆಆರ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 9 ವಿಕೆಟ್ ಗೆಲುವು
ರಾಜಸ್ತಾನ ರಾಯಲ್ಸ್
Published On :

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ 2023(IPL)ರ 56ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ತಂಡ 9 ವಿಕೆಟ್ ಗಳಿಂದ ಗೆಲುವು ಸಾಧಿಸಿದ್ದಾರೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(KKR) ಮತ್ತು ರಾಜಸ್ಥಾನ್ ರಾಯಲ್ಸ್ (RR) ನಡುವೆ ನಡೆದಿದ್ದ ಟಾಸ್ ಗೆದ್ದ ರಾಜಸ್ಥಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. 

ಕೋಲ್ಕತ್ತಾ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 149 ರನ್ ಗಳಿಸಿತು. ಕೋಲ್ಕತ್ತಾ ಪರ ವೆಂಕಟೇಶ್ ಅಯ್ಯರ್ 42 ಎಸೆತಗಳಲ್ಲಿ 57 ರನ್ ಗಳಿಸಿದರು. ನಿತೀಶ್ ರಾಣಾ 17 ಎಸೆತಗಳಲ್ಲಿ 22 ರನ್ ಗಳಿಸಿದರು. ರಾಜಸ್ಥಾನ ಪರ ಯಜುವೇಂದ್ರ ಚಹಾಲ್ 4 ವಿಕೆಟ್ ಪಡೆದರು.

150 ರನ್ ಗಳ ಗುರಿ ಪಡೆದ ರಾಜಸ್ಥಾನ ಪರ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಸಂಜು ಸ್ಯಾಮ್ಸನ್ ಬಿರುಸಿನ ಇನ್ನಿಂಗ್ಸ್‌ ಆಡಿದರು. ಜೈಸ್ವಾಲ್ 47 ಎಸೆತಗಳಲ್ಲಿ 98 ರನ್ ಗಳಿಸಿದರೆ ಸಂಜು ಸ್ಯಾಮ್ಸನ್ 48 ರನ್ ಬಾರಿಸಿದರು. ರಾಜಸ್ಥಾನ ತಂಡ 13.1 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 151 ರನ್ ಪೇರಿಸಿ 9 ವಿಕೆಟ್‌ಗಳಿಂದ ಜಯ ದಾಖಲಿಸಿತು. 

ಈ ಗೆಲುವಿನೊಂದಿಗೆ ರಾಜಸ್ಥಾನ ತಂಡವು 12 ಅಂಕಗಳನ್ನು ಪಡೆದಿದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದರೆ ಕೆಕೆಆರ್ 10 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.