ರಿಂಕು, ರಾಣಾ ಅಬ್ಬರ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೋಲ್ಕತಾ ಗೆ 6 ವಿಕೆಟ್ ಜಯ!
ಚೆನ್ನೈ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕೋಲ್ಕತಾ 6 ವಿಕೆಟ್ ಗಳ ಜಯ ಗಳಿಸಿದೆ.

ಚೆನ್ನೈ: ಚೆನ್ನೈ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕೋಲ್ಕತಾ 6 ವಿಕೆಟ್ ಗಳ ಜಯ ಗಳಿಸಿದೆ.
ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಕೋಲ್ಕತಾ ಉತ್ತಮ ಪ್ರದರ್ಶನ ನೀಡಿತು.
ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 6 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಕೋಲ್ಕತಾ ಕೋಲ್ಕತ್ತಾ 18.3 ಓವರ್‌ಗಳಲ್ಲಿ 147 ರನ್ ಗಳಿಸುವ ಮೂಲಕ ಗೆಲುವನ್ನು ತನ್ನದಾಗಿಸಿಕೊಂಡಿತು.
ಕೋಲ್ಕತಾ ಆರಂಭದಲ್ಲಿ ಬಹುಬೇಗ ಅಂದರೆ 33 ರನ್‌ಗಳಿಗೆ 3 ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತ ಎದುರಿಸಿತು. ಆದರೆ 4 ನೇ ವಿಕೆಟ್ ಗೆ ಜೊತೆಯಾದ ನಿತೀಶ್ ರಾಣಾ (44 ಎಸೆತಗಳಲ್ಲಿ 57 ರನ್) ಮತ್ತು ರಿಂಕು ಸಿಂಗ್ (43 ಎಸೆತಗಳಲ್ಲಿ 54 ರನ್) 76 ಎಸೆತಗಳಲ್ಲಿ 99 ರನ್ ಜೊತೆಯಾಟದ ಮೂಲಕ ತಂಡ ಜಯಗಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು.
ಈ ಗೆಲುವಿನೊಂದಿಗೆ ಕೋಲ್ಕತ್ತಾ 8ನೇ ಸ್ಥಾನದಿಂದ 12 ಅಂಕಗಳೊಂದಿಗೆ 7ನೇ ಸ್ಥಾನಕ್ಕೆ ಜಿಗಿದು ಪ್ಲೇ ಆಫ್ ಕನಸು ಜೀವಂತವಾಗಿರಿಸಿಕೊಂಡರೆ, ಚೆನ್ನೈ 15 ಅಂಕಗಳೊಂದಿಗೆ 2ನೇ ಸ್ಥಾನ ಕಾಯ್ದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


