ಕೋಹ್ಲಿ ಅಬ್ಬರದ ಶತಕ: ಹೈದರಾಬಾದ್ ವಿರುದ್ಧ ಆರ್ ಸಿಬಿಗೆ ರೋಚಕ ಜಯ; ಪ್ಲೇ ಆಫ್ ಕನಸು ಜೀವಂತ!
ಹೈದರಾಬಾದ್ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರದ ಶತಕ (64 ಎಸೆತಗಳಲ್ಲಿ 100 ರನ್) ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿಬಿ 8 ವಿಕೆಟ್ ಗಳ ಜಯ ಗಳಿಸಿದೆ.

ಹೈದರಾಬಾದ್: ಹೈದರಾಬಾದ್ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರದ ಶತಕ (64 ಎಸೆತಗಳಲ್ಲಿ 100 ರನ್) ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿಬಿ 8 ವಿಕೆಟ್ ಗಳ ಜಯ ಗಳಿಸಿದೆ.
ಈ ಗೆಲುವಿನ ಮೂಲಕ ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತವಾಗಿದೆ. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯ ಆರ್ ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯದಂತಾಗಿತ್ತು.
187 ರನ್ ಗಳ ಗುರಿ ಬೆನ್ನತ್ತಿದ ಆರ್ ಸಿಬಿ ತಂಡದ ಪರ ಆರಂಭಿಕ ಆಟಗಾರರಾಗಿದ್ದ ಕೊಹ್ಲಿ, ಆರಂಭದಿಂದಲೂ ಆಕ್ರಮಣಕಾರಿ ಬ್ಯಾಟಿಂಗ್ ನಡೆಸುತ್ತಾ ಬಂದರು. ಕೊಹ್ಲಿಗೆ ಪಾಫ್ ಡುಪ್ಲೆಸಿಸ್ ಸಾಥ್ ನೀಡಿದರು.
4 ವರ್ಷಗಳ ಬಳಿಕ ಭರ್ಜರಿ ಶತಕ ದಾಖಲಿಸಿರುವ ಕೊಹ್ಲಿ, ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಶತಕ ದಾಖಲಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದು ಕ್ರಿಸ್ ಗೇಲ್ ಜತೆಗೆ ಸ್ಥಾನ ಹಂಚಿಕೊಂಡಿದ್ದಾರೆ.
ಕೊಹ್ಲಿ ಹಾಗೂ ಪ್ಲೆಸಿಸ್ ಜೋಡಿ ಮೊದಲ ವಿಕೆಟ್ಗೆ 108 ಎಸೆತಗಳಲ್ಲಿ 172 ರನ್ಗಳ ಜತೆಯಾಟವಾಡಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


