ಐಪಿಎಲ್ 2023: ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 4 ವಿಕೆಟ್ ಗಳ ರೋಚಕ ಜಯ
ಶಿಮ್ಲಾದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 4 ವಿಕೆಟ್ ಗಳ ರೋಚಕ ಜಯ ದೊರೆತಿದೆ.

ಶಿಮ್ಲಾ: ಶಿಮ್ಲಾದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 4 ವಿಕೆಟ್ ಗಳ ರೋಚಕ ಜಯ ದೊರೆತಿದೆ.
ದೇವದತ್ ಪಡಿಕಲ್ (30 ಎಸೆತಗಳಲ್ಲಿ 51 ರನ್) ಯಶಸ್ವಿ ಜೈಸ್ವಾಲ್ (36 ಎಸೆತಗಳಲ್ಲಿ 50 ರನ್) ಶಿಮ್ರಾನ್ ಹೆಟ್ಮೇಯರ್ (28 ಎಸೆತಗಳಲ್ಲಿ 46 ರನ್) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನಕ್ಕೆ 4 ವಿಕೆಟ್ ಗಳ ಜಯ ಗಳಿಸಿತು.
ಈ ಗೆಲುವಿನ ಮೂಲಕ ರಾಜಸ್ಥಾನ ತಂಡದ ಪ್ಲೇ ಆಫ್ ಕನಸು ಜೀವಂತವಾಗಿದೆ. ರಾಜಸ್ಥಾನ ತಂಡಕ್ಕೆ ಪ್ರಬಲ ಪೈಪೋಟಿ ನೀಡಿದ ಪಂಜಾಬ್ ಕಿಂಗ್ಸ್ ಟೂರ್ನಿಯಿಂದ ಹೊರಬಿದ್ದಿದೆ.
ರಾಜಸ್ಥಾನ ತಂಡ ಪಂಜಾಬ್ ವಿರುದ್ಧ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ 14 ಅಂಕ ಪಡೆದು, +0.148 ರನ್‌ರೇಟ್‌ನೊಂದಿಗೆ 5 ನೇ ಸ್ಥಾನಕ್ಕೇರಿದೆ. ರಾಜಸ್ಥಾನ ತಂಡ ಪ್ಲೇ ಆಫ್ ತಲುಪಬೇಕಾದರೆ. ಮೇ.22 ರಂದು ನಡೆಯಲಿರುವ ಪಂದ್ಯದಲ್ಲಿ ಆರ್ ಸಿಬಿ ಹಾಗೂ ಮುಂಬೈ ತಂಡಗಳು ಸೋಲು ಕಾಣಬೇಕಿದೆ.
ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಪಂಜಾಬ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು. ಬೃಹತ್ ಮೊತ್ತದ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ 19.4 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


