ಐಪಿಎಲ್ 2023: ಡೆಲ್ಲಿ ವಿರುದ್ಧ 77 ರನ್ ಗಳ ಗೆಲುವು, ಪ್ಲೇಆಫ್‌ಗೆ ಅರ್ಹತೆ ಪಡೆದ 2ನೇ ತಂಡ ಸಿಎಸ್ ಕೆ!
ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ 67 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 77 ರನ್ ಗಳಿಂದ ಮಣಿಸಿದ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆದ ಎರಡನೇ ತಂಡವಾಗಿ ಹೊರಹೊಮ್ಮಿತು.

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ 67 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 77 ರನ್ ಗಳಿಂದ ಮಣಿಸಿದ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆದ ಎರಡನೇ ತಂಡವಾಗಿ ಹೊರಹೊಮ್ಮಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿದರು. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ 79, ಡೇವೊನ್ ಕಾನ್ವೇ 87 ರನ್ ಗಳಿಸುವ ಮೂಲಕ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ನಂತರ ಬಂದ ಶಿವಂ ದುಬೆ 22 ರನ್ ಗಳಿಸಿದರೆ ನಾಯಕ ಎಂಎಸ್ ಧೋನಿ ಅಜೇಯ 5, ರವೀಂದ್ರ ಜಡೇಜಾ ಅಜೇಯ 20 ರನ್ ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಗೆ 224 ರನ್ ಗಳ ಗೆಲುವಿನ ಗುರಿ ನೀಡಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್, ಅನ್ರೀಚ್ ನಾರ್ಟೋಜ್, ಚೇತನ್ ಸಕಾರಿಯಾ ತಲಾ ಒಂದೊಂದು ವಿಕೆಟ್ ಪಡೆದರು. 224 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಪೃಥ್ವಿ ಶಾ 5 ರನ್ ಗಳಿಗೆ ಔಟಾದರೆ, ಡೇವಿಡ್ ವಾರ್ನರ್ 86, ಯಶ್ ದುಲ್ 13, ಅಕ್ಸರ್ ಪಟೇಲ್ 15 ರನ್ ಗಳಿಸಿದರು.
ಉಳಿದ ಯಾವುದೇ ಆಟಗಾರರು ಎರಡಂಕಿ ದಾಟುವಲ್ಲಿ ವಿಫಲರಾದರು. ಇದರಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 77 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಪ್ಲೇಆಫ್‌ಗೆ ಅರ್ಹತೆ ಪಡೆಯಿತು. ಗುಜರಾತ್ ಟೈಟಾನ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


