ಐಪಿಎಲ್ 2023 ಫೈನಲ್: ಶತಕದಂಚಿನಲ್ಲಿ ಮುಗ್ಗರಿಸಿದ ಸಾಯಿ ಸುದರ್ಶನ್, ಚೆನ್ನೈ ತಂಡಕ್ಕೆ 215 ರನ್ ಬೃಹತ್ ಗುರಿ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು ಗುಜರಾತ್ ಟೈಟನ್ಸ್ ತಂಡ 215 ರನ್ ಗಳ ಬೃಹತ್ ಗುರಿ ನೀಡಿದೆ.

ಅಹ್ಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು ಗುಜರಾತ್ ಟೈಟನ್ಸ್ ತಂಡ 215 ರನ್ ಗಳ ಬೃಹತ್ ಗುರಿ ನೀಡಿದೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ವೃದ್ಧಿಮಾನ್ ಸಹಾ ಅರ್ಧಶತಕ ಹಾಗೂ ಸಾಯಿ ಸುದರ್ಶನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಗುಜರಾತ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 215 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.
96 off just 47 deliveries under tremendous pressure!
A spectacular knock from Sai Sudharsan comes to an end
Follow the match https://t.co/WsYLvLrRhp#TATAIPL | #Final | #CSKvGT | @sais_1509 pic.twitter.com/m2SLZ7SlH5
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಗುಜರಾತ್ ಟೈಟನ್ಸ್ ಗೆ ಆರಂಭಿಕರಾದ ಶುಭ್ ಮನ್ ಗಿಲ್ ಮತ್ತು ವೃದ್ದಿಮಾನ್ ಸಾಹ ಉತ್ತಮ ಆರಂಭ ಒದಗಿಸಿದರು. ವೃದ್ಧಿಮಾನ್ ಸಹಾ 39 ಎಸೆತಗಳಲ್ಲಿ 54 ರನ್ ಗಳಿಸಿದರೆ, ಶುಬ್‌ಮನ್ ಗಿಲ್ 20 ಎಸೆತಗಳಲ್ಲಿ 39 ರನ್ ಗಳಿಸಿದರು.
ಇದನ್ನೂ ಓದಿ: ಐಪಿಎಲ್ 2023 ಫೈನಲ್: ಬಿಗ್ ಸ್ಕ್ರೀನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್, ಅಭಿಮಾನಿಗಳ ಆಕ್ರೋಶ!
ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 47 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 96 ರನ್ ಕಲೆಹಾಕಿ ಅಬ್ಬರಿಸಿ ಶತಕ ವಂಚಿತರಾದರು. ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ ಅಜೇಯ 21 ರನ್ ಗಳಿಸಿದರೆ, ರಶೀದ್ ಖಾನ್ ಡಕ್ಔಟ್ ಆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


