ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್! ಅಭಿಮಾನಿಗಳು ಹೇಳಿದ್ದು ಹೀಗೆ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಕೇವಲ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ಶ್ರೇಯಸ್ಸಿಗೆ ಪಾತ್ರರಾದರು.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಕೇವಲ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ಶ್ರೇಯಸ್ಸಿಗೆ ಪಾತ್ರರಾದರು.
ಹೌದು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಗಳಿಸುವ ಮೂಲಕ ನೆದರ್ಲ್ಯಾಂಡ್ಸ್ ಗೆಲ್ಲಲು 411ರನ್ ಗಳ ಗುರಿ ನೀಡಿತು. ಈ ಬೃಹತ್ ಮೊಕೆತ್ತ ಪೇರಿಸುವಲ್ಲಿ ಕೆಎಲ್. ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಅಮೋಘ ಪ್ರದರ್ಶನ ಪ್ರಮುಖ ಪಾತ್ರ ವಹಿಸಿತು.
ಶ್ರೇಯಸ್ ಅಯ್ಯರ್ 94 ಎಸೆತಗಳಲ್ಲಿ 128 ರನ್ ಗಳಿಸಿ ಅಜೇಯರಾಗಿ ಉಳಿದರೆ, ಕೆಎಲ್ ರಾಹುಲ್ 64 ಎಸೆತಗಳಲ್ಲಿ 102 ರನ್ ಗಳಿಸಿದರು. ಈ ಮೂಲಕ ಕೆಎಲ್ ರಾಹುಲ್ ಕೇವಲ 62 ಎಸೆತಗಳಲ್ಲಿ ಹೊಸ ಮೈಲಿಗಲ್ಲು ತಲುಪುವ ಮೂಲಕ ವಿಶ್ವಕಪ್ ಪಂದ್ಯದಲ್ಲಿ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರ ಎನಿಸಿಕೊಂಡರು.
ಅಫ್ಘಾನಿಸ್ತಾನ ವಿರುದ್ಧ 63 ಎಸೆತಗಳಲ್ಲಿ ಶತಕ ಗಳಿಸಿದ್ದ ರೋಹಿತ್ ಶರ್ಮಾ ಅವರ ಹಿಂದಿನ ದಾಖಲೆಯನ್ನು ಮುರಿದರು.ಈ ಸಾಧನೆ ಮಾಡುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಕೆಎಲ್ ರಾಹುಲ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


