ICC World Cup 2023 Semi-final 2: AUS vs SA; ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ!
ಐಸಿಸಿ ಪುರುಷರ ವಿಶ್ವಕಪ್ 2023ನ ಎರಡನೇ ಸೆಮಿಫೈನಲ್‌ನಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡವು ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಸದ್ಯ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕೋಲ್ಕತ್ತಾ: ಐಸಿಸಿ ಪುರುಷರ ವಿಶ್ವಕಪ್ 2023ನ ಎರಡನೇ ಸೆಮಿಫೈನಲ್‌ನಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡವು ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಸದ್ಯ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಪಂದ್ಯ ನಡೆಯುತ್ತಿದ್ದು, ಉಭಯ ತಂಡಗಳಿಗೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಸೆಣಸಲಿದೆ.
ಈ ಆವೃತ್ತಿಯಲ್ಲಿ ಆಡಿರುವ 9 ಪಂದ್ಯಗಳಲ್ಲಿ ಏಳರಲ್ಲಿ ಗೆಲುವು ಸಾಧಿಸುವುದರೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ, ಆಡಿರುವ 9 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಕಾಂಗರೂ ಪಡೆಯೊಂದಿಗೆ ಸೆಣಸುತ್ತಿದೆ.
16 ವರ್ಷಗಳ ನಂತರ, ಏಕದಿನ ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಕಾಂಗರೂಗಳನ್ನು ಎದುರಿಸುತ್ತಿದೆ. ಈ ಎರಡು ತಂಡಗಳು 1999 ಮತ್ತು 2007ರಲ್ಲಿ ಕೊನೆಯ ಬಾರಿಗೆ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಎರಡು ಬಾರಿ ಕೂಡ ಆಸ್ಟ್ರೇಲಿಯಾ ಗೆಲುವು ಸಾಧಿಸಿತ್ತು.
ದಕ್ಷಿಣ ಆಫ್ರಿಕಾ ಇದುವರೆಗೂ ಒಂದು ಬಾರಿ ಕೂಡ ವಿಶ್ವಕಪ್‌ನಲ್ಲಿ ಫೈನಲ್ ತಲುಪಿಲ್ಲ, ಸೆಮಿಫೈನಲ್ ಹಂತದಲ್ಲೇ ಎಡವುತ್ತಿದ್ದ ಹರಿಣಗಳಿಗೆ ಈ ಬಾರಿ ಫೈನಲ್‌ಗೇರುವ ಮತ್ತೊಂದು ಅವಕಾಶ ಸಿಕ್ಕಿದೆ. ಈ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಕಾಂಗರೂಗಳನ್ನು ಮಣಿಸುವ ವಿಶ್ವಾಸದಲ್ಲಿದೆ.
ಉಭಯ ತಂಡಗಳ ಆಡುವ ಬಳಗ
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ತೆಂಬ ಬವುಮ (ನಾಯಕ), ರಾಸಿ ವ್ಯಾನ್ ಡೆರ್ ಡುಸೆನ್, ಏಡೆನ್ ಮಾರ್ಕ್ರಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸನ್, ಕೇಶವ್ ಮಹಾರಾಜ್, ಜೆರಾಲ್ಡ್ ಕೋಟ್ಜಿ, ಕಗಿಸೊ ರಬಾಡ ಮತ್ತು ತಬ್ರೈಝ್ ಶಮ್ಸಿ
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಜಾಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಂ ಜಂಪಾ, ಜೊಶ್ ಹೇಝಲ್‌ವುಡ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


