ವಿಶ್ವಕಪ್ ಫೈನಲ್: ಆಸ್ಟ್ರೇಲಿಯಾ ತಂಡಕ್ಕೆ ಭಾರತದ ಈ ಆಟಗಾರ ದೊಡ್ಡ ಬೆದರಿಕೆಯಂತೆ!
ನಾಳಿನ ಭಾರತ- ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ವೀಕ್ಷಿಸಲು ಇಡೀ ಜಗತ್ತೇ ಜಾತಕ ಪಕ್ಷಿಯಂತೆ ಕಾಯುತ್ತಿದೆ.

ಅಹಮಾದಾಬಾದ್: ನಾಳಿನ ಭಾರತ- ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯವನ್ನು ವೀಕ್ಷಿಸಲು ಇಡೀ ಜಗತ್ತೇ ಜಾತಕ ಪಕ್ಷಿಯಂತೆ ಕಾಯುತ್ತಿದೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮದಗಜಗಳ ನಡುವಿನ ಹೋರಾಟ ತೀವ್ರ ಕುತೂಹಲ ಕೆರಳಿಸಿದ್ದು, ಉಭಯ ದೇಶಗಳ ಆಟಗಾರರು ಪ್ರಶಸ್ತಿ ಗೆಲ್ಲಲು ಭಾರಿ ಕಸರತ್ತು ನಡೆಸುತ್ತಿದ್ದಾರೆ. ಉಭಯ ದೇಶಗಳ ಜನರು ತಮ್ಮ ದೇಶ ಪ್ರಶಸ್ತಿ ಗೆದ್ದು ಬರಲಿ ಎಂದು ಹಾರೈಸುತ್ತಿದ್ದಾರೆ.
ಈ ಮಧ್ಯೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ನೀಡಿರುವ ಹೇಳಿಕೆ ಆಸಕ್ತಿದಾಯಕವಾಗಿದೆ. ಆಸ್ಟ್ರೇಲಿಯಾ ತಂಡಕ್ಕೆ ಯಾವ ಭಾರತೀಯ ಆಟಗಾರ ಸವಾಲು ಎಂಬ ಪ್ರಶ್ನೆಗೆ ಉತ್ತರಿಸಿದ ಪ್ಯಾಟ್ ಕಮ್ಮಿನ್ಸ್, ಭಾರತ ಸಾಕಷ್ಟು ಸುಸ್ಥಿತಿಯಲ್ಲಿರುವ ತಂಡವಾಗಿದೆ. ಮೊಹಮ್ಮದ್ ಶಮಿಯೇ ನಮಗೆ ದೊಡ್ಡ ಬೆದರಿಕೆ ಅಂತಾ ಹೇಳಿದ್ದಾರೆ.
ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಬೆಂಕಿಯಾಗಿದ್ದಾರೆ. ಈ ಬಾರಿಯ ವಿಶ್ವಕಪ್ ನಲ್ಲಿ ಕಠಿಣ ಪರಿಸ್ಥಿತಿಯಲ್ಲಿಯೂ ಹೆಚ್ಚಿನ ವಿಕೆಟ್ ಪಡೆಯುವ ಮೂಲಕ ಭಾರತ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಹಾಗಾಗಿ ಎದುರಾಳಿ ತಂಡದಲ್ಲಿ ಶಮಿ ನಡುಕ ಹುಟ್ಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


