ಏಕದಿನ ವಿಶ್ವಕಪ್ 2023: ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 199 ರನ್‌ಗಳಿಗೆ ಆಲೌಟ್ ಮಾಡಿದ ಭಾರತ!
ಭಾರತ ವಿರುದ್ಧದ ವಿಶ್ವಕಪ್ ಅಭಿಯಾನದಲ್ಲಿ ಆಸ್ಟ್ರೇಲಿಯಾದ ಬ್ಯಾಟಿಂಗ್ ವಿಫಲವಾಗಿದೆ ಎಂದು ಸಾಬೀತಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಗಿದೆ.

ಚೆನ್ನೈ: ಭಾರತ ವಿರುದ್ಧದ ವಿಶ್ವಕಪ್ ಅಭಿಯಾನದಲ್ಲಿ ಆಸ್ಟ್ರೇಲಿಯಾದ ಬ್ಯಾಟಿಂಗ್ ವಿಫಲವಾಗಿದೆ ಎಂದು ಸಾಬೀತಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದಿದ್ದಾರೆ. ಆಸ್ಟ್ರೇಲಿಯಾದ ಒಬ್ಬ ಬ್ಯಾಟ್ಸ್‌ಮನ್ ಕೂಡ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ.
ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಇದರ ನಂತರ ಬುಮ್ರಾ ಭಾರತಕ್ಕೆ ಮೊದಲ ಯಶಸ್ಸನ್ನು ನೀಡಿದರು. ಬುಮ್ರಾ ಮಿಚೆಲ್ ಮಾರ್ಷ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಇಲ್ಲಿಂದ ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ಅಧಿಕಾರ ವಹಿಸಿಕೊಂಡರು. ಇವರಿಬ್ಬರು ಅರ್ಧಶತಕದ ಜೊತೆಯಾಟವಾಡಿದರು.
ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ವಾರ್ನರ್ 41 ರನ್ ಗಳಿಸಿದ್ದಾಗ ಕುಲದೀಪ್ ಯಾದವ್‌ಗೆ ಬಲಿಯಾದರು. ಅವರ ನಂತರ, ಸ್ಟೀವ್ ಸ್ಮಿತ್ ಅವರನ್ನು ಜಡೇಜಾ 46 ರನ್‌ಗಳಿಗೆ ಔಟ್ ಮಾಡಿದರು. ಆನಂತರ, ಲಬುಸ್ಚಾಗ್ನೆ 27 ರನ್ ಗಳಿಸಿದ್ದಾಗ ರವೀಂದ್ರ ಜಡೇಜಾ ಅವರ ಎಸೆತದಲ್ಲಿ ಹೊರನಡೆದರು. ಅಲೆಕ್ಸ್ ಕ್ಯಾರಿಯನ್ನೂ ಜಡೇಜಾ ಖಾತೆ ತೆರೆಯದೆ ವಾಪಸ್ ಕಳುಹಿಸಿದರು.
ಕುಲದೀಪ್ ಯಾದವ್ ಮತ್ತೊಮ್ಮೆ ತಮ್ಮ ಕೆಲಸವನ್ನು ಮಾಡಿದರು. 15 ರನ್ ಗಳಿಸಿದ್ದ ಮ್ಯಾಕ್ಸ್ ವೆಲ್ ರನ್ನು ಔಟ್ ಮಾಡಿದರು. ಇದಾದ ನಂತರ ಅಶ್ವಿನ್ 8 ರನ್ ಬಾರಿಸಿದ್ದ ಕ್ಯಾಮರಾನ್ ಗ್ರೀನ್ ಅವರನ್ನು ಔಟ್ ಮಾಡಿದರು. ಒಟ್ಟಾರೆ ಆಸ್ಟ್ರೇಲಿಯಾ 49.3 ಓವರ್ ನಲ್ಲಿ 199ಕ್ಕೆ ಆಲೌಟ್ ಆಯಿತು. ಭಾರತದ ಪರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದರು. ಕುಲದೀಪ್ 2 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


