ವಿಶ್ವಕಪ್: ಪಾಕ್ ಪತ್ರಕರ್ತರಿಗೆ ಸಿಕ್ಕಿಲ್ಲ ವೀಸಾ, ಆದರೆ ವಾಟ್ಸ್ ಆಪ್ ಮೂಲಕ ಪ್ರಶ್ನೆ ಕೇಳಲು ಅವಕಾಶ!
ಭಾರತದಲ್ಲಿ ಕ್ರಿಕೆಟ್ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು, ಪಾಕ್ ಪತ್ರಕರ್ತರಿಗೆ ಇನ್ನೂ ವೀಸಾ ಲಭ್ಯವಾಗಿಲ್ಲ. ಆದರೆ ಅವರಿಗೆ ವಾಟ್ಸ್ ಆಪ್ ಮೂಲಕ ಪ್ರಶ್ನೆ ಕೇಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಐಸಿಸಿ ಮಾಧ್ಯಮ ನಿರ್ವಾಹಕರು ಮಾಹಿತಿ ನೀಡಿದ್ದಾರೆ.

ನವದೆಹಲಿ: ಭಾರತದಲ್ಲಿ ಕ್ರಿಕೆಟ್ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು, ಪಾಕ್ ಪತ್ರಕರ್ತರಿಗೆ ಇನ್ನೂ ವೀಸಾ ಲಭ್ಯವಾಗಿಲ್ಲ. ಆದರೆ ಅವರಿಗೆ ವಾಟ್ಸ್ ಆಪ್ ಮೂಲಕ ಪ್ರಶ್ನೆ ಕೇಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಐಸಿಸಿ ಮಾಧ್ಯಮ ನಿರ್ವಾಹಕರು ಮಾಹಿತಿ ನೀಡಿದ್ದಾರೆ.
ಪಾಕ್ ಪತ್ರಕರ್ತರು ಕೇಳುವ ಪ್ರಶ್ನೆಗಳನ್ನು ಪಾಕ್ ತಂಡದ ಆಟಗಾರರಿಗೆ ಕೇಳಲಾಗುತ್ತದೆ ಎಂದು ಐಸಿಸಿ ಹೇಳಿದೆ.
ಪಾಕ್ ತಂಡ ಹೈದರಾಬಾದ್ ನಲ್ಲಿ ನಾಳೆ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ತರಬೇತಿ ನಡೆಯಲಿದೆ. ಬಳಿಕ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪತ್ರಿಕಾ ಸಂವಾದ ನಡೆಯಲಿದೆ.
ಇದಕ್ಕೂ ಮೊದಲು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸೋಮವಾರ ಐಸಿಸಿಗೆ ಪತ್ರ ಬರೆದಿದ್ದು, ವಿಶ್ವಕಪ್‌ಗೆ ಆಗಮಿಸಲು ಪತ್ರಕರ್ತರು ಮತ್ತು ಅಭಿಮಾನಿಗಳಿಗೆ ಇನ್ನೂ ವೀಸಾ ಸಿಗದಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


