ಐಸಿಸಿ ವಿಶ್ವಕಪ್ 2023: ಭಾರತ ಗೆಲ್ಲಲು 273 ರನ್ ಗಳ ಗುರಿ ನೀಡಿದ ಅಪ್ಘಾನಿಸ್ತಾನ!
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ, ಭಾರತ ಗೆಲ್ಲಲು 273 ರನ್ ಗಳ ಗುರಿ ನೀಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಕಲೆಹಾಕಿತು.

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ, ಭಾರತ ಗೆಲ್ಲಲು 273 ರನ್ ಗಳ ಗುರಿ ನೀಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಕಲೆಹಾಕಿತು.
ಅಫ್ಘಾನಿಸ್ತಾನ ಪರ ಹಷ್ಮತ್ ಉಲ್ಲಾ ಶಾಹಿದಿ ಹಾಗೂ ಅಜ್ಮತ್ ಉಲ್ಲಾ ಒಮರ್ ಝೈ ಅವರು ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಶಾಹಿದಿ 88 ಎಸೆತಗಳಲ್ಲಿ 80 ರನ್ ಗಳಿಸಿದರೆ, ಒಮರ್ ಝೈ 69 ಎಸೆತಗಳಲ್ಲಿ 62 ರನ್ ಗಳಿಸಿದರು.
ಭಾರತ ಪರ ಜಸ್ ಪ್ರಿತ್ ಬೂಮ್ರಾ 4 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 2, ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು. ಆದರೆ, ಏಕದಿನ ಬೌಲರ್ ಗಳ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿರುವ ಮೊಹಮ್ಮದ್ ಸಿರಾಜ್ ಯಾವುದೇ ವಿಕೆಟ್ ಪಡೆಯದೆ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


