ಭಾರತ-ಅಫ್ಘಾನಿಸ್ತಾನ ಪಂದ್ಯದ ವೇಳೆ ಮೈದಾನದಲ್ಲೇ ಕೈ-ಕೈ ಮಿಲಾಯಿಸಿದ ಫ್ಯಾನ್ಸ್
ಐಪಿಎಲ್ ನಲ್ಲಿ ಶುರುವಾಗಿದ್ದ ವಿರಾಚ್ ಕೊಹ್ಲಿ ಮತ್ತು ನವೀನ್ ಉಲ್ ಹಕ್ ಜಗಳ ಕೊನೆಗೂ ವಿಶ್ವಕಪ್ ಟೂರ್ನಿಯಲ್ಲಿ ಅಂತ್ಯವಾಗಿರುವಂತೆಯೇ ಇತ್ತ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರು ಮಾತ್ರ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ.

ನವದೆಹಲಿ: ಐಪಿಎಲ್ ನಲ್ಲಿ ಶುರುವಾಗಿದ್ದ ವಿರಾಚ್ ಕೊಹ್ಲಿ ಮತ್ತು ನವೀನ್ ಉಲ್ ಹಕ್ ಜಗಳ ಕೊನೆಗೂ ವಿಶ್ವಕಪ್ ಟೂರ್ನಿಯಲ್ಲಿ ಅಂತ್ಯವಾಗಿರುವಂತೆಯೇ ಇತ್ತ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರು ಮಾತ್ರ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ.
ಹೌದು.. ಏಕದಿನ ವಿಶ್ವಕಪ್ ಟೂರ್ನಿಯ (ICC World Cup 2023) ಭಾರತ ಹಾಗೂ ಅಫಘಾನಿಸ್ತಾನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಟೂರ್ನಿಯಲ್ಲಿ ಸತತ ಎರಡನೇ ಪಂದ್ಯ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿದೆ.
ಹಾಗೆಯೇ, ವಿರಾಟ್ ಕೊಹ್ಲಿ (Virat Kohli) ಅಫಘಾನಿಸ್ತಾನದ ನವೀನ್ ಉಲ್ ಹಕ್ ಅವರು ಸಿಟ್ಟು, ಸೆಡವು ಮರೆತು ಒಂದಾಗಿದ್ದಾರೆ. ಆದರೆ, ಮೈದಾನದಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಭಾರತದ ಕ್ರಿಕೆಟ್ ಅಭಿಮಾನಿಗಳು (Indian Cricket Fans) ಮಾತ್ರ ಹೊಡೆದಾಡಿಕೊಂಡಿದ್ದಾರೆ.
ಭಾರತ-ಅಫಘಾನಿಸ್ತಾನ ಪಂದ್ಯದ ವೇಳೆ ಭಾರತದ ಕ್ರಿಕೆಟ್ ಅಭಿಮಾನಿಗಳ ಮಧ್ಯೆಯೇ ಜಗಳ ನಡೆದಿದೆ. ಕೆಲವರು ಭಾರತ ಕ್ರಿಕೆಟ್ ತಂಡದ ಜೆರ್ಸಿ ತೊಟ್ಟಿದ್ದು, ಇನ್ನೂ ಕೆಲವರು ಸಾಮಾನ್ಯ ಉಡುಪಿನಲ್ಲಿದ್ದಾರೆ. ಎರಡು ಗುಂಪುಗಳ ಮಧ್ಯೆ ಮೊದಲು ವಾಗ್ವಾದ ಆರಂಭವಾಗಿದೆ. ಇದಾದ ಬಳಿಕ ಕೈ ಕೈ ಮಿಲಾಯಿಸಿಕೊಳ್ಳುವಷ್ಟರ ಮಟ್ಟಿಗೆ ಜಗಳ ತಾರಕಕ್ಕೇರಿದೆ.
ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಿಂದ ಟೀಕೆಗಳು ವ್ಯಕ್ತವಾಗಿವೆ. ಮೈದಾನದಲ್ಲಿ ಪ್ರತಿಸ್ಪರ್ಧಿ ಆಟಗಾರರೊಂದಿಗೇ ಭಾರತದ ಆಟಗಾರರು ಸೌಹಾರ್ದತಯುತವಾಗಿ ಇರುವಾಗ, ನಾವೇ ಹೀಗೆ ಕಿತ್ತಾಡಿಕೊಂಡರೆ ಹೇಗೆ ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


