ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಪಾಕಿಸ್ತಾನವನ್ನು ಮಣಿಸಿ ಅದೇ ತಂಡದ ದಾಖಲೆ ಸರಿಗಟ್ಟಿದ ಭಾರತ
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ಇಂದು ಅಚ್ಚರಿ ದಾಖಲೆಗೆ ಪಾತ್ರವಾಗಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತ ತಂಡ ತನ್ನ ಜೈತ್ರಯಾತ್ರೆ ಮುಂದುವರೆಸಿದ್ದು ಮಾತ್ರವಲ್ಲದೇ ಅದೇ ತಂಡದ ದಾಖಲೆಯನ್ನೂ ಕೂಡ ಸರಿಗಟ್ಟಿದೆ.

ಅಹ್ಮದಾಬಾದ್: ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ಇಂದು ಅಚ್ಚರಿ ದಾಖಲೆಗೆ ಪಾತ್ರವಾಗಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತ ತಂಡ ತನ್ನ ಜೈತ್ರಯಾತ್ರೆ ಮುಂದುವರೆಸಿದ್ದು ಮಾತ್ರವಲ್ಲದೇ ಅದೇ ತಂಡದ ದಾಖಲೆಯನ್ನೂ ಕೂಡ ಸರಿಗಟ್ಟಿದೆ.
ಹೌದು.. ಇಂದು ಗುಜರಾತ್ ನ ಅಹ್ಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಭರ್ಜರಿ 7 ವಿಕೆಟ್ ಗಳ ಅಂತರದ ಜಯ ಗಳಿಸಿದೆ. ಪಾಕಿಸ್ತಾನ ನೀಡಿದ 192 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ 30.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿ ಜಯ ಗಳಿಸಿತು. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಬಾರತ ತಂಡ ಪಾಕಿಸ್ತಾನದ ವಿರುದ್ಧ ತನ್ನ ಅಜೇಯ ಯಾತ್ರೆ ಮುಂದುವರೆಸಿದೆ.
ಈ ವರೆಗೂ ಉಭಯ ತಂಡಗಳೂ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ 8 ಬಾರಿ ಮುಖಾಮುಖಿಯಾಗಿದ್ದು, ಈ ಎಂಟೂ ಬಾರಿಯೂ ಭಾರತ ತಂಡ ಜಯಗಳಿಸಿದೆ. ಆ ಮೂಲಕ ಇಂದು ಸೋತ ಅದೇ ಪಾಕಿಸ್ತಾನದ ದಾಖಲೆಯನ್ನು ಭಾರತ ಸರಿಗಟ್ಟಿದೆ. ಪಾಕಿಸ್ತಾನ ಕೂಡ ಇಂತಹುದೇ ದಾಖಲೆ ಹೊಂದಿದ್ದು ಆ ತಂಡ ಶ್ರೀಲಂಕಾದ ವಿರುದ್ಧ ಈ ವರೆಗೂ 8 ಬಾರಿ ಗೆಲುವು ಸಾಧಿಸಿದೆ. ಉಳಿದಂತೆ ವೆಸ್ಟ್ ಇಂಡೀಸ್ ತಂಡ ಜಿಂಬಾಬ್ವೆ ವಿರುದ್ಧ ಮತ್ತು ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶದ ವಿರುದ್ಧ ತಲಾ 6 ಸತತ ಗೆಲುವುಗಳನ್ನು ಹೊಂದಿದೆ.
Most one sides contests in World Cups
8-0 Pakistan vs Sri Lanka
8-0 India vs Pakistan *
6-0 West Indies vs Zimbabwe
6-0 New Zealand vs Bangladesh
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


