ಐಸಿಸಿ ವಿಶ್ವಕಪ್: ಟೀಂ ಇಂಡಿಯಾ ಗೆಲುವಿಗೆ 257 ರನ್ ಟಾರ್ಗೆಟ್ ನೀಡಿದ ಬಾಂಗ್ಲಾ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶ ನಿಗದಿತ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿದೆ.

ಪುಣೆ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶ ನಿಗದಿತ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಜಿದ್ ಹಸನ್ ಹಾಗೂ ಲಿಟನ್ ದಾಸ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಗದಿತ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಗೆಲುವಿನ ತವಕದಲ್ಲಿರುವ ಟೀಂ ಇಂಡಿಯಾ ಗೆಲುವಿಗೆ 257 ರನ್ ಗಳ ಟಾರ್ಗೆಟ್ ನೀಡಿದೆ.
ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ಲಿಟನ್ ದಾಸ್ 66 ರನ್ ಗಳಿಸಿದರೆ, ಭಾರತದ ಪರ ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಸಿರಾಜ್ ಅವರು ತಲಾ ಎರಡು ವಿಕೆಟ್ ಪಡೆದು ಮಿಂಚಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


