ಮೊಹಮ್ಮದ್ ಅಜರುದ್ದೀನ್‌ಗೆ ಮತ್ತೆ ಸಂಕಷ್ಟ: ಮತ್ತೊಂದು ಎಫ್‌ಐಆರ್ ದಾಖಲು!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಸಂಸ್ಥೆಯ ನಿಧಿ ದುರುಪಯೋಗದ ಆರೋಪದ ಮೇಲೆ ಅಜರುದ್ದೀನ್ ಮತ್ತು ಹೈದರಾಬಾದ್ ಕ್ರಿಕೆಟ್ ಸಂಸ್ಥೆ(ಎಚ್‌ಸಿಎ)ನ ಕೆಲವು ಮಾಜಿ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಸಂಸ್ಥೆಯ ನಿಧಿ ದುರುಪಯೋಗದ ಆರೋಪದ ಮೇಲೆ ಅಜರುದ್ದೀನ್ ಮತ್ತು ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್‌ಸಿಎ)ನ ಕೆಲವು ಮಾಜಿ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುನೀಲ್ ಬೋಸ್ ಅವರ ದೂರಿನ ಆಧಾರದ ಮೇಲೆ ಎಚ್‌ಸಿಎ ಮಾಜಿ ಅಧ್ಯಕ್ಷ ಅಜರುದ್ದೀನ್ ಮತ್ತು ಇತರ ಮಾಜಿ ಪದಾಧಿಕಾರಿಗಳ ವಿರುದ್ಧ ಉಪ್ಪಳ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪದ ಬಗ್ಗೆ ಅಜರುದ್ದೀನ್ ಹೇಳಿದ್ದೇನು?
ಅಜರುದ್ದೀನ್ ತನ್ನ ವಿರುದ್ಧದ ಆರೋಪಗಳು ಸುಳ್ಳು ಮತ್ತು ಆಧಾರರಹಿತ ಪಿತೂರಿ ಎಂದು ಹೇಳಿದ್ದಾರೆ. ಭಾರತ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ವಿವಾದಗಳೊಂದಿಗೆ ಸಂಬಂಧ ಹೊಂದಿದ್ದಾರೆ. ಈ ಹಿಂದೆಯೂ ಹಲವು ವಿವಾದಗಳಲ್ಲಿ ಅವರ ಹೆಸರು ಕೇಳಿಬಂದಿತ್ತು.
ಅಜರುದ್ದೀನ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ
ಅಜರುದ್ದೀನ್ ಒಬ್ಬ ಅದ್ಭುತ ಕ್ರಿಕೆಟಿಗ. ಈಗಲೂ ಅವರ ಬ್ಯಾಟಿಂಗ್ ಅನ್ನು ಜನರು ಇಷ್ಟಪಡುತ್ತಾರೆ. ಆದರೆ 2000ರಲ್ಲಿ ಅವರು ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಒಳಗಾಗಿದ್ದರು. ನಂತರ ಅವರನ್ನು ನಿಷೇಧಿಸಲಾಯಿತು. ಸುದೀರ್ಘ ಕಾನೂನು ಹೋರಾಟ ನಡೆಸಿದ ಅವರು 12 ವರ್ಷಗಳ ನಂತರ ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಪರಿಹಾರ ಪಡೆದರು. ಅಷ್ಟರೊಳಗೆ ಅವರ ವೃತ್ತಿಜೀವನ ಮುಗಿದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


