ನೆದರ್ ಲ್ಯಾಂಡ್ಸ್ ವಿರುದ್ಧ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್ ಹೇಳಿದ್ದು ಹೀಗೆ....
ನೆದರ್ ಲ್ಯಾಂಡ್ಸ್ ವಿರುದ್ಧದ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ದಾಖಲಿಸಿದ ಆಸ್ಟ್ರೇಲಿಯಾ ಬ್ಯಾಟರ್ ಗ್ಲೆನ್ ಮ್ಯಾಕ್ಸ್ ವೆಲ್ ಐಪಿಎಲ್ ಸೇರಿದಂತೆ ಭಾರತದಲ್ಲಿ ಆಡಿರುವ ಎಲ್ಲಾ ಪಂದ್ಯಗಳ ಅನುಭವಗಳಿಂದ 40 ಎಸೆತಗಳಲ್ಲಿ ಶತಕ ಬಾರಿಸಿರುವುದಾಗಿ ಹೇಳಿದರು.

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ನೆದರ್ ಲ್ಯಾಂಡ್ಸ್ ವಿರುದ್ಧದ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ದಾಖಲಿಸಿದ ಆಸ್ಟ್ರೇಲಿಯಾ ಬ್ಯಾಟರ್ ಗ್ಲೆನ್ ಮ್ಯಾಕ್ಸ್ ವೆಲ್ ಐಪಿಎಲ್ ಸೇರಿದಂತೆ ಭಾರತದಲ್ಲಿ ಆಡಿರುವ ಎಲ್ಲಾ ಪಂದ್ಯಗಳ ಅನುಭವಗಳಿಂದ 40 ಎಸೆತಗಳಲ್ಲಿ ಶತಕ ಬಾರಿಸಿರುವುದಾಗಿ ಹೇಳಿದರು. ಗ್ಲೇನ್ ಮ್ಯಾಕ್ಸ್ ವೆಲ್ 106 ರನ್ ಗಳ ನೆರವಿನಿಂದ ಆಸ್ಟ್ರೇಲಿಯಾ ನೆದರ್ ಲ್ಯಾಂಡ್ ವಿರುದ್ಧ 8 ವಿಕೆಟ್ ನಷ್ಟಕ್ಕೆ 399 ರನ್ ಗಳಿಸಿತು.
ಪಂದ್ಯ ಮುಗಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಐಪಿಎಲ್ ಸಮಯದಲ್ಲಿ ಭಾರತದಲ್ಲಿ ಸ್ವಲ್ಪ ಯಶಸ್ಸನ್ನು ಪಡೆದ ನಾನು ಈ ವಿಶ್ವಕಪ್‌ನಲ್ಲಿ ಆತ್ಮವಿಶ್ವಾಸದಿಂದ ಆಡಲು ಬಂದಿದ್ದೇನೆ ಮತ್ತು ಪಾಕಿಸ್ತಾನದ ವಿರುದ್ಧ ಅಭ್ಯಾಸ ಪಂದ್ಯದಲ್ಲಿ 70 ರನ್ ಗಳಿಸುವುದರೊಂದಿಗೆ ಉತ್ತಮವಾಗಿ ಆರಂಭಿಸಿದ್ದಾಗಿ ತಿಳಿಸಿದರು.
ಇದನ್ನೂ ಓದಿ: ವಿಶ್ವಕಪ್ ನಲ್ಲಿ ವೇಗದ ಶತಕ ದಾಖಲಿಸಿದ ಮ್ಯಾಕ್ಸ್ ವೆಲ್!
ಕಳೆದ ಕೆಲವು ವರ್ಷಗಳಲ್ಲಿ ನಿರಂತರವಾಗಿ ಐಪಿಎಲ್ ನಲ್ಲಿ ಭಾರತದಲ್ಲಿ ಆಡುತ್ತಿದ್ದರಿಂದ ಏಕದಿನ ಕ್ರಿಕೆಟ್ ನಲ್ಲಿ ನಾನು ರನ್ ಗಳಿಸಿಲ್ಲ ಎಂದು ಹೇಳುವ ಜನರ ಬಗ್ಗೆ ಚಿಂತಿಸುವುದಿಲ್ಲ. ಅದು ನಿಜವಾಗಿಯೂ ವಿಷಯವಲ್ಲಾ, ಟಿ-20 ಪಂದ್ಯದಂತೆಯೇ ಏಕದಿನ ಪಂದ್ಯದಲ್ಲಿಯೂ ಆಡಿದರೆ ನನ್ನ ತಂಡ ಗೆಲುವು ಸಾಧಿಸುವ ವಿಶ್ವಾಸ ಹೊಂದಬಹುದು ಎಂದರು. 2015ರಲ್ಲಿ ಶ್ರೀಲಂಕಾ ವಿರುದ್ಧ 51 ಎಸೆತಗಳಲ್ಲಿ ಶತಕ ಗಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


